Latestಕ್ರೈಂವೈರಲ್ ನ್ಯೂಸ್

ಬಿಜೆಪಿ ಮಂಡಲ ಕಾರ್ಯದರ್ಶಿ ಆತ್ಮಹತ್ಯೆ..! ಕೆಲ ದಿನಗಳ ಹಿಂದೆಯಷ್ಟೇ ಪತಿಯನ್ನು ಕಳೆದುಕೊಂಡಿದ್ದ ಮಂಜುಳಾ..!

843

ನ್ಯೂಸ್ ನಾಟೌಟ್: ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಮಂಡಲ ಕಾರ್ಯದರ್ಶಿ ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮತ್ತಿಕೆರೆಯಲ್ಲಿ ನಡೆದಿದೆ.
ಸದ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಯಶವಂತಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಮಂಡಲಕ್ಕೆ ಒಂದು ದಿನದ ಹಿಂದೆಯಷ್ಟೇ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳ ನೇಮಕವಾಗಿತ್ತು ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ಪತಿಯನ್ನು ಕಳೆದುಕೊಂಡಿದ್ದ ಮಂಜುಳಾ, ಮಾನಸಿಕವಾಗಿ ನೊಂದಿದ್ದರಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿತ್ತು. ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇಂದು(ಮಾ.11) ಮಧ್ಯಾಹ್ನ 2:30ರ ಸುಮಾರಿಗೆ ಮತ್ತಿಕೆರೆಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಅಂತಿಮ ದರ್ಶನಕ್ಕೆ ಮಾಜಿ ಡಿಎಸಿಂ ಡಾ.ಸಿ.ಎನ್.ಅಶ್ವಥ್‌ ನಾರಾಯಣ್‌ ತೆರಳಿದ್ದಾರೆ.

See also  ಯೋಧನ ಮನವಿಯನ್ನು ನಿರಾಕರಿಸಿದ್ರಾ ಕೊಹ್ಲಿ..? ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget