ಜೈಪುರ: ಹುಸಿ ಭರವಸೆಗಳ ಸುರಿಮಳೆಯನ್ನೇ ಹರಿಸಿದ ಬಿಜೆಪಿ ಶಾಸಕನೊಬ್ಬ ಇಬ್ಬರು ಯುವತಿಯರಿಗೆ ನಯವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ನೌಕರಿ ನೀಡುವುದಾಗಿ ಒಬ್ಬಳು ಯುವತಿಗೆ ಹಾಗೂ ಮತ್ತೊಬ್ಬಳು ಯುವತಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ದೂರು ನೀಡಲಾಗಿದೆ. ರಾಜಸ್ಥಾನದ ಗೋಗುಂಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್ ಭೀಲ್ ವಿರುದ್ಧ ಈ ರೀತಿಯ ಗಂಭೀರ ಆರೋಪ ಕೇಳಿ ಬಂದಿದೆ. ಮಹಿಳೆಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಶಾಸಕ ಹಲವು ಸಲ ಅತ್ಯಾಚಾರ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.