ಕರಾವಳಿಕ್ರೈಂರಾಜಕೀಯವೈರಲ್ ನ್ಯೂಸ್

ಬಿಜೆಪಿ ಮುಖಂಡನಿಗೆ ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ 7 ಕೋಟಿ ರೂಪಾಯಿ ವಂಚಿಸಿದ್ರಾ ಚೈತ್ರ ಕುಂದಾಪುರ? ರಾತ್ರೋರಾತ್ರಿ ಸಿಸಿಬಿ ಬಲೆಗೆ ಬಿದ್ದದ್ದು ಹೇಗೆ ಸಾಮಾಜಿಕ ಹೋರಾಟಗಾರ್ತಿ?

181

ನ್ಯೂಸ್ ನಾಟೌಟ್ : ತಮ್ಮ ಪ್ರಖರ ಮಾತುಗಳಿಂದಲೇ ಜನರನ್ನು ಸೆಳೆಯುತ್ತಿದ್ದ ಸಾಮಾಜಿಕ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ ಆರೋಪದಡಿ ಎದುರಿಸುತ್ತಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ ತಡರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಈಕೆಯನ್ನು ಬಂಧಿಸಿದ್ದಾರೆ.

ಕಳೆದ ಕೆಲದಿನಗಳಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಈಕೆಯ ಜೊತೆಗೆ ಮತ್ತಿಬ್ಬರು ಆರೋಪಿಗಳನ್ನೂ ವಶಕ್ಕೆ ಪಡೆಯಲಾಗಿದೆ. ಸದ್ಯ ಪ್ರಕರಣದಲ್ಲಿ ಚೈತ್ರ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಮದು ವರದಿ ತಿಳಿಸಿದೆ.

See also  ಮೊಬೈಲ್‌ ಕರೆ ಮಾಡುವಂತೆ ಮಹಿಳೆಗೆ ಟಾರ್ಚರ್‌, ಆಕ್ರೋಶಗೊಂಡ ಪತಿಯಿಂದ ಡಿಶ್‌ ರಿಪೇರಿ ಬಶೀರನಿಗೆ ಹಿಗ್ಗಾಮುಗ್ಗ ಥಳಿತ.. ಇಲ್ಲಿ ನೋಡಿ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget