ಬೆಂಗಳೂರು

ಬ್ರಿಜ್ ಭೂಷಣ್ ಸಿಂಗ್‌ ಬೆಂಗಳೂರು ಕಂಬಳಕ್ಕೆ ಬರಲ್ಲ: ವಿವಾದಕ್ಕೆ ತೆರೆ ಎಳೆದ ಅಶೋಕ್‌ ರೈ

142

ನ್ಯೂಸ್ ನಾಟೌಟ್ : ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಭರದ ಸಿದ್ಧತೆಗಳು ನಡಿತಿವೆ. ಹೀಗಾಗಿ ಈ ಕಾರ್ಯಕ್ರಮಕ್ಕೆ ನಟಿ ಅನುಷ್ಕಾ ಶೆಟ್ಟಿ ಸೇರಿದಂತೆ ಐಶ್ವರ್ಯಾ ರೈ ಬರುತ್ತಿದ್ದಾರೆ ಎನ್ನುವ ಬೆನ್ನಲ್ಲೇ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರು ಆಗಮಿಸುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು.ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಕೆಲ ಹೊತ್ತಿನಲ್ಲೇ ಅವರು ಕಾರ್ಯಕ್ರಮಕ್ಕೆ ಬರಲ್ಲ ಎಂದು ಪುತ್ತೂರು ಕಾಂಗ್ರೆಸ್‌ ಶಾಸಕ ಮತ್ತು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ರೈ ತಿಳಿಸಿದ್ದಾರೆ.

ಇದು ದೊಡ್ಡ ಕಾರ್ಯಕ್ರಮ ಆಗಿರುವ ಕಾರಣ ಬೇರೆ ಬೇರೆ ಸಂಘಟನೆಯವರು ಬಂದು ಅನೇಕರು ಮನವಿ ಮಾಡುತ್ತಾರೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಬಂದು ವೇದಿಕೆಗೆ ಅವರ ಹೆಸರನ್ನು ಇಡಲು ಹೇಳುತ್ತಾರೆ. ಸಿದ್ದಿ ಜನಾಂಗದವರು ಬಂದು ಅವರನ್ನು ಆಹ್ವಾನಿಸುವಂತೆ ಕೇಳಿದ್ದರು. ಆದರೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಮೊನ್ನೆಯೇ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು.ನವೆಂಬರ್ 25 ಮತ್ತು 26ರಂದು ಅರಮನೆ ಮೈದಾನದಲ್ಲಿ ಕಂಬಳ ಆಯೋಜನೆಗೊಂಡಿದೆ. ಕುಸ್ತಿಪಟುಗಳಿಗೆ ನಡೆಯಲಿರುವ ಸನ್ಮಾನ ಕಾರ್ಯಕ್ರಮಕ್ಕೆ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಿತ್ತು.ಮಹಿಳಾ ಕುಸ್ತಿ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವನ್ನು ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಎದುರಿಸುತ್ತಿದ್ದು, ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ದೇಶದಾದ್ಯಂತ ಸದ್ದು ಮಾಡಿತ್ತು.ಈ ಹಿನ್ನಲೆಯಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬಾರದೆಂದು ಕೆಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದರು.

See also  4 ಡಜನ್‌ ಮೊಟ್ಟೆಗೆ ಕೇವಲ 49 ರೂ..! ಆನ್‌ಲೈನ್‌ನಲ್ಲಿ ಖರೀದಿಸಲು ಹೋಗಿ ಬರೋಬ್ಬರಿ 48,199 ರೂ. ಕಳ್ಕೊಂಡ ಮಹಿಳೆ..!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget