ಉಡುಪಿರಾಜಕೀಯರಾಜ್ಯವೈರಲ್ ನ್ಯೂಸ್

‘ನಾನು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ರು’ ಎಂದು ಬೇಸರಿಸಿಕೊಂಡ ರಘುಪತಿ ಭಟ್..! 6 ವರ್ಷ ರಘುಪತಿ ಭಟ್ ಬಿಜೆಪಿಯಿಂದ ವಜಾ..?

ನ್ಯೂಸ್‌ ನಾಟೌಟ್‌: ಶಿಸ್ತು ಸಮಿತಿಯ ನೋಟಿಸ್ ಈವರೆಗೂ ನನಗೆ ತಲುಪಿಲ್ಲ. ಮಾಧ್ಯಮಗಳ ಮೂಲಕ ಉಚ್ಚಾಟನೆ ಎಂದು ಗೊತ್ತಾಯಿತು ಎಂದು ಬಿಜೆಪಿಯಲ್ಲಿ ರೆಬಲ್ ಆಗಿ ಪದವಿದರ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ರಘುಪತಿ ಭಟ್ ಹೇಳಿದ್ದಾರೆ. ಪಕ್ಷ ನನ್ನ ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಗೆ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿಯಿಂದ 6 ವರ್ಷ ಉಚ್ಚಾಟನೆ ವಿಚಾರವಾಗಿ ರಘುಪತಿ ಭಟ್ ಬಿಜೆಪಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ನಾನು ಮೋದಿಗೆ ಬೈದಿಲ್ಲ, ರಾಜ್ಯದ ನಾಯಕರಿಗೆ ಬೈದಿಲ್ಲ. ಇಂತಹ ವಜಾಗಳಿಗೆಲ್ಲ ನಾನು ತಲೆ ಬಿಸಿ ಮಾಡಿಕೊಳ್ಳಲ್ಲ. ಬಿಜೆಪಿ ಪಕ್ಷದ ವ್ಯವಸ್ಥೆಯ ಬಗ್ಗೆ ನನಗೆ ಅಸಮಾಧಾನವಿದೆ. ಪಕ್ಷದ ಎಲ್ಲ ಹುದ್ದೆಯಿಂದ ವಜಾ ಮಾಡುತ್ತೇವೆ ಅಂದಿದ್ದಾರೆ. ಪಕ್ಷದ ನಾಯಕರನ್ನು ಟೀಕಿಸಿದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಮತ್ತೆ ಬಂದರು. ಪಕ್ಷಕ್ಕೆ ವಾಪಸಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರು. ಇದು ಶಾಶ್ವತ ವಜಾ ಅಲ್ಲ ಪರಿಷತ್ ಚುನಾವಣೆಯಲ್ಲಿ ನಾನು ಗೆದ್ದ ಮೇಲೆ ವಜಾ ರದ್ದಾಗುತ್ತದೆ. ಬಿಜೆಪಿ ಕಾರ್ಯಕರ್ತನನ್ನ ವಜಾ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

ಉಡುಪಿಯಲ್ಲಿ ಪಾಪದ ಕಾರ್ಯಕರ್ತರು ಸಂಘ ಪಕ್ಷ ಅಂತ ಕೆಲಸ ಮಾಡುತ್ತಾರೆ. ಕರಾವಳಿ ವಿಚಾರದಲ್ಲಿ ಬಿಜೆಪಿ ಮನಬಂದಂತೆ ನಡೆದುಕೊಳ್ಳುತ್ತಿದೆ. ಈ ಚುನಾವಣೆಯಲ್ಲಿ ಮತದಾರರು ಕಾರ್ಯಕರ್ತರು ಸರಿಯಾದ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್ ಅವರು ಬಂಡಾಯದಿಂದ ಹಿಂದೆ ಸರಿಯದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದರು, ಮತ್ತು ಈಗ ಪಕ್ಷದ ಎಲ್ಲಾ ಸ್ಥಾನಗಳಿಂದ ೬ ವರ್ಷಗಳ ಕಾಲ ವಜಾ ಮಾಡಲಾಗಿದೆ. ಈ ಬಗ್ಗೆ ಮತ್ತೆ ಮಾತು ಮುಂದುವರಿಸಿದ ರಘುಪತಿ ಭಟ್, ನಾನು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಪಾರಸ್ಸು ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

Click 👇

https://newsnotout.com/2024/05/cinematic-theft-and-viral-video-issue
https://newsnotout.com/2024/05/neonotals-are-nomore-by-fire
https://newsnotout.com/2024/05/kannada-news-pakisthan-quran-issue

Related posts

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಗೆ ಸ್ಪರ್ಧಿಸುತ್ತಿರುವ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಪರಿಚಯ, ಯಾರ್ಯಾರಿದ್ದಾರೆ ಕಣದಲ್ಲಿ..?

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಇನ್ನಿಲ್ಲ, ಹೃದಯಾಘಾತಕ್ಕೆ ಬಲಿ

ತಂಗಿಯ ಸಮಾಧಿ ಸ್ಥಳದಲ್ಲಿ ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್..! ವೀಕ್ಷಕರಿಂದ ತೀವ್ರ ಆಕ್ರೋಶ