ಕರಾವಳಿ

ಸಾವರ್ಕರ್ ಹೆಸರಲ್ಲಿ ಬಿಜೆಪಿ ನವರಂಗಿ ನಾಟಕ

493

ನ್ಯೂಸ್ ನಾಟೌಟ್:  ‘ಜಾತಿಯ ಹೆಸರಿನಲ್ಲಿ ದೇಶವನ್ನು ಸಂಘಟಿಸಿದ ಬಿಜೆಪಿ ನಾಯಕರಿಗೆ ಸಾವರ್ಕರ್ ಹೆಸರು ಎತ್ತುವ ನೈತಿಕತೆ ಇಲ್ಲ. ಕಾಂಗ್ರೆಸ್‌ಗಿಂತಲೂ ಹೀನಾಯವಾಗಿ ಧರ್ಮವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡಿದ್ದು, ಅಧಿಕಾರ ಉಳಿಸಿಕೊಳ್ಳುವ ಕೊನೆಯ ಪ್ರಯತ್ನವಾಗಿ ಸಾವರ್ಕರ್ ಹೆಸರು ಬಳಸುತ್ತಿದೆ’ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಟೀಕಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ವಾರ್ಥ ರಾಜಕೀಯ ಮಾಡುವ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಂಡು ನಂತರ  ಸಾವರ್ಕರ್ ಬಗ್ಗೆ ಧ್ವನಿ ಎತ್ತಲಿ. ಸಾವರ್ಕರ್ ಕಟ್ಟಿದ ಅಖಿಲ ಭಾರತ ಹಿಂದೂ ಮಹಾಸಭಾ ಆಗಲಿ, ಅವರ ಅಖಂಡ ಭಾರತದ ಪರಿಕಲ್ಪನೆಯಾಗಲಿ, ಹಿಂದುತ್ವ ವಿಚಾರಧಾರೆಯಾಗಲಿ ಬಿಜೆಪಿಗೆ ಬೇಕಾಗಿಲ್ಲ. ಮುಂಬರುವ ಚುನಾವಣೆಗೆ ಸಾವರ್ಕರ್ ಹೆಸರು ಮತ್ತು ಭಾವಚಿತ್ರ ಮಾತ್ರ ಬೇಕಾಗಿದೆ. ಇದು ಬಿಜೆಪಿಯ ದಿವಾಳಿತನವನ್ನು ತೋರಿಸುತ್ತದೆ’ ಎಂದರು.

See also  ಭಾರಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಫ್ಲೆಕ್ಸ್‌..! 11 ದ್ವಿಚಕ್ರ ವಾಹನಗಳು ಪುಡಿ..ಪುಡಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget