ರಾಜಕೀಯವಿಡಿಯೋವೈರಲ್ ನ್ಯೂಸ್

ಬಿಜೆಪಿ ಟಿಕೆಟ್ ಗಾಗಿ ಮೊಬೈಲ್ ಟವರ್ ಏರಿ ಪ್ರತಿಭಟನೆ! ಕೆಳಗಿಳಿಸಲು ಪೊಲೀಸರ ಹರಸಾಹಸ! ಇಲ್ಲಿದೆ ವಿಡಿಯೋ

228

ನ್ಯೂಸ್ ನಾಟೌಟ್ :  ವಿಧಾನಸಭೆ ಚುನಾವಣೆ ವಿವಿಧ ಬಗೆಯ ಘಟನೆಗಲಿಗೆ ಸಾಕ್ಷಿಯಾಗುತ್ತಿವೆ. ನಾಮಪತ್ರಗಳು ಸಲ್ಲಿಕೆಯಾಗುತ್ತಿದ್ದು, ಮತ್ತೊಂದು ಕಡೆ ಟಿಕೆಟ್ ವಂಚಿತರು ಬಂಡಾಯದ ಎದ್ದಿದ್ದಾರೆ. ಇಲ್ಲೊಬ್ಬ ಬಿಜೆಪಿ ಟಿಕೆಟ್ ನನಗೆ ಕೊಡಬೇಕೆಂದು ಬಿಎಸ್ಎನ್ಎಲ್ ಮೊಬೈಲ್ ಟವರ್ ಏರಿ ಹಠ ಹಿಡಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ಅಜ್ಜಂಪುರ ತಾಲೂಕಿನ ಶಿವನಿ ಆರ್.ಎಸ್.ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವನಿ ಆರ್.ಎಸ್. ಗ್ರಾಮದ ರಂಗಪ್ಪ ಎಂದು ಗುರುತಿಸಲಾಗಿದೆ. ಅಜ್ಜಂಪುರ ತರೀಕೆರೆ ವಿಧಾನಸಭಾ ವ್ಯಾಪ್ತಿಗೆ ಒಳಪಟ್ಟಿದ್ದು, ಬಿಜೆಪಿಯಿಂದ ಈಗಾಗಲೇ ಡಿ.ಎಸ್.ಸುರೇಶ್ ಕಣಕ್ಕಿಳಿದಿದ್ದಾರೆ. ಈ ನಡುವೆ ರಂಗಪ್ಪ, ನನಗೆ ಬಿಜೆಪಿ ಟಿಕೆಟ್ ಬೇಕು ಎಂದು ಪಟ್ಟು ಹಿಡಿದು ಮೊಬೈಲ್ ಟವರ್ ಏರಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ರಂಗಪ್ಪನನ್ನು ಮನವೊಲಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ರಂಗಪ್ಪ ಕಳೆದ 15 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿದ್ದು ಟಿಕೆಟ್ ಗಾಗಿ ಹಠ ಹಿಡಿದು ಟವರ್ ಏರಿದ್ದು ಪೊಲೀಸರು ಮನವೊಲಿಸಿ ಕೆಳಗಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

See also  ಮತಗಟ್ಟೆ ಬಳಿ ಮಹಿಳೆಗೆ ಹೃದಯ ಸ್ತಂಭನ..! ಜೀವ ಉಳಿಸಿದ ಮತದಾನ ಮಾಡಲು ಬಂದ ವೈದ್ಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget