ಕರಾವಳಿ

ಮಂಗಳೂರು: ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ಅಪರಿಚಿತರಿಂದ ಚೂರಿ ಇರಿತ, ಇಬ್ಬರು ಕಾರ್ಯಕರ್ತರಿಗೆ ಗಂಭೀರ ಗಾಯ, ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

ನ್ಯೂಸ್ ನಾಟೌಟ್: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೇರಿದ ವಿಜಯೋತ್ಸವವನ್ನು ಮಂಗಳೂರಿನಲ್ಲಿ ಆಚರಿಸುತ್ತಿದ್ದ ವೇಳೆ ಕಾರ್ಯಕರ್ತರ ಮೇಲೆ ಅಪರಿಚಿತರು ಚೂರಿಯಿಂದ ದಾಳಿ ನಡೆಸಿರುವ ಘಟನೆ ನಿನ್ನೆ (ಭಾನುವಾರ , ಜೂ.9) ರಾತ್ರಿ ನಡೆದಿದೆ.

ದುರ್ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ನಡೆದಿದೆ. ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರಿಗೆ ವಿಜಯೋತ್ಸವ ಆಚರಿಸಲು ಕರೆಯನ್ನು ನೀಡಿತ್ತು. ಅದರಂತೆ ಬೊಳಿಯಾರಿನಲ್ಲಿ ವಿಜಯೋತ್ಸವ ಆಚರಿಸುವ ವೇಳೆ ಹಿಂದಿನಿಂದ ಬಂದು ಚೂರಿ ಇರಿದಿದ್ದಾರೆ ಎನ್ನಲಾಗಿದೆ.

ಬೋಳಿಯಾರು ನಿವಾಸಿಗಳಾದ ಹರೀಶ್ ‌ಹಾಗೂ ನಂದ ಕುಮಾರ್ ಗೆ ಇರಿತಕ್ಕೊಳಕ್ಕಾದವರು ಎನ್ನಲಾಗಿದ್ದು ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿ ದೊರಕಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಕೊಕ್ಕಡ:ಇಳೆಯನ್ನು ಸ್ಪರ್ಶಿಸಿದ ಮಳೆರಾಯ..! ಭಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ!

ಆಗಸ್ಟ್‌ 13ರಂದು ಸುಳ್ಯದಲ್ಲಿ ಅದ್ಧೂರಿಯಾಗಿ ‘ಆಟಿಡೊಂಜಿ ದಿನ’, ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದಿಂದ ಆಯೋಜನೆ

ಮಂಗಳೂರು: 3 ಯುವತಿಯರ ಮೃತದೇಹ ಪೋಷಕರಿಗೆ ಹಸ್ತಾಂತರ, ರೆಸಾರ್ಟ್ ಮಾಲಕ ಮತ್ತು ಮ್ಯಾನೇಜರ್ ಅರೆಸ್ಟ್..!