ಪುತ್ತೂರು

ಮಾಜಿ ಶಾಸಕ ಇದಿನಬ್ಬ ಪುತ್ರ ಬಿ.ಎಂ. ಪಾಷಾ ಮನೆಗೆ ನುಗ್ಗಲು ಯತ್ನ, ವಿಶ್ವ ಹಿಂದೂ ಪರಿಷತ್‌ ಶರಣ್ ಪಂಪ್ ವೆಲ್ ವಿರುದ್ದ ದೂರು

377

ಉಳ್ಳಾಲ: ಮಾಜಿ ಶಾಸಕ ಇದಿನಬ್ಬ ಅವರ ಪುತ್ರ ಬಿ.ಎಂ. ಭಾಷಾ ಮನೆಗೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಹಾಗೂ ಮತ್ತಿತರ ಕಾರ್ಯಕರ್ತರ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮೇಲಂಗಡಿಯ ಅಬೂಬಕ್ಕರ್ ಎಂಬುವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಗ್ರ ನಂಟಿರುವ ಹಿನ್ನೆಲೆಯಲ್ಲಿ ಎನ್ ಐ ಎ ಅಧಿಕಾರಿಗಳು ಇತ್ತೀಚೆಗೆ ಭಾಷಾ ಮನೆಗೆ ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ಇದಿನಬ್ಬ ಕುಟುಂಬದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಿಂದೂ ಸಂಘಟನೆಗಳು ಪಾಷಾ ಮನೆಯ ಎದುರು ಪ್ರತಿಭಟನೆ ನಡೆಸಿದವು.

See also  ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರನ್ನು ಭೇಟಿಯಾದ ಪುತ್ತಿಲ ಪರಿವಾರ ನಾಯಕರು..!ಕರಾವಳಿಯ ರಾಜಕೀಯದಲ್ಲಿ ಗರಿಗೆದರಿದ ಕುತೂಹಲ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget