ಕ್ರೈಂವೈರಲ್ ನ್ಯೂಸ್

ದೇವಿ ದೇವಸ್ಥಾನಕ್ಕೆ ಬಿಟ್ಟಿದ್ದ ಕೋಣ ನಾಪತ್ತೆ..! ಹುಡುಕಿ-ಹುಡುಕಿ ಸಿಗದಿದ್ದಾಗ ಪೊಲೀಸ್ ಠಾಣೆ ಮೆಟ್ಟಿಲೇರಿದ ಗ್ರಾಮಸ್ಥರು

242

ನ್ಯೂಸ್ ನಾಟೌಟ್ : ದುರ್ಗಾದೇವಿ ದೇವಸ್ಥಾನಕ್ಕೆ ಬಿಟ್ಟಿದ್ದ ದೇವಿಯ ಕೋಣ ಕಾಣೆಯಾಗಿದ್ದು, ಕೋಣವನ್ನು ಹುಡುಕಿಕೊಡುವಂತೆ ಗ್ರಾಮಸ್ಥರು ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ಡಿ.16 ರಂದು ನಡೆದಿದೆ.

ಕಳೆದ ಕೆಲವು ವರ್ಷಗಳಿಂದ ಗ್ರಾಮದ ದೇವಿಗೆ ಹಬ್ಬದ ಕೋಣವನ್ನು ಬಿಡಲಾಗಿತ್ತು. ಆದರೆ ಕಳೆದ ಎರಡು ತಿಂಗಳಿನಿಂದ ಕೋಣ ನಾಪತ್ತೆಯಾಗಿದೆ. ಗ್ರಾಮದ ಜನರು ಕೋಣವನ್ನು ಹುಡುಕಾಡಿ ಸಿಗದೇ ಇದ್ದಾಗ ಕಾಣೆಯಾಗಿರುವ ದೇವರ ಕೋಣವನ್ನು ಹುಡುಕಿ ಕೊಡುವಂತೆ ರಟ್ಟೀಹಳ್ಳಿ ಠಾಣೆಗೆ ದೌಡಾಯಿಸಿ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಗ್ರಾಮಸ್ಥರು ಹುಡುಕುವ ಕೆಲಸ ಮಾಡಿದ್ದಾರೆ. ಅದರೂ ಕೋಣ ಪತ್ತೆಯಾಗಿಲ್ಲ. ಗ್ರಾಮದ ಸುತ್ತಮುತ್ತಲಿನ ಗ್ರಾಮ ಸೇರಿದಂತೆ ಹಲವು ಗ್ರಾಮಕ್ಕೆ ಹೋಗಿ ಹುಡುಕಾಟ ಮಾಡಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ಪತ್ತೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ ಎನ್ನಲಾಗಿದೆ.

https://newsnotout.com/2024/12/tirupathi-darshana-pass-kannada-news-viral-news-d-karnataka/
See also  ಸುಳ್ಯ: ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಮೃತ್ಯು..! ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget