ಕ್ರೈಂವೈರಲ್ ನ್ಯೂಸ್ಸಿನಿಮಾ

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ..! ಮನೆಗಳ್ಳತನಕ್ಕೆ ಬಂದಿದ್ದವನಿಂದ ಕೃತ್ಯ, ನಟ ಆಸ್ಪತ್ರೆಗೆ ದಾಖಲು..!

235

ನ್ಯೂಸ್ ನಾಟೌಟ್: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಸದ್ಯ ಅವರನ್ನು ಮುಂಬೈ ನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಗಳ್ಳತನಕ್ಕೆ ಬಂದಿದ್ದ ದುಷ್ಕರ್ಮಿಯೊಬ್ಬ ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ನಿವಾಸದಲ್ಲಿ ಮಧ್ಯರಾತ್ರಿ 2.30ರ ಸುಮಾರಿಗೆ ಘಟನೆ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೆಯಲ್ಲಿದ್ದವರು ಎಚ್ಚರಗೊಂಡ ನಂತರ ದರೋಡೆಕೋರ ಸ್ಥಳದಿಂದ ಪರಾರಿಯಾಗಿದ್ದಾನೆ. ನಟನಿಗೆ 2 ಕಡೆ ಚಾಕುವಿನಿಂದ ಆಳವಾಗಿ ಇರಿಯಲಾಗಿದೆ. ಬೆನ್ನುಮೂಳೆ ಸೇರಿದಂತೆ ಆರು ಭಾಗಗಳಲ್ಲಿ ಗಾಯಗಳಾಗಿವೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ. ಸೈಫ್ ಅಲಿ ಖಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Click

https://newsnotout.com/2025/01/madikeri-fire-kannada-news-madikeri-infront-of-wine-shop-d/
See also  ಖ್ಯಾತ ಸಾಹಿತಿ ಎಚ್.​ಎಸ್​ ವೆಂಕಟೇಶಮೂರ್ತಿ ನಿಧನ..! ರಾಷ್ಟ್ರಪ್ರಶಸ್ತಿ ವಿಜೇತ ‘ಚಿನ್ನಾರಿ ಮುತ್ತ' ಚಿತ್ರಕ್ಕೆ ಕಥೆ ಮತ್ತು ಹಾಡುಗಳುನ್ನು ಬರೆದಿದ್ದ ಕವಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget