Latest

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕತ್ರಿನಾ ಕೈಫ್ ಭೇಟಿ – ಸಂತಾನಕ್ಕಾಗಿ ಸರ್ಪ ಸಂಸ್ಕಾರ ಪೂಜೆ ಮಾಡಿದ್ರಾ ಬಾಲಿವುಡ್ ನಟಿ?

710
Spread the love

ನ್ಯೂಸ್‌ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಭೇಟಿ ನೀಡಿದ್ದಾರೆ. ಮಾಸ್ಕ್ ಹಾಕಿಕೊಂಡು, ತಲೆಗೆ ದುಪ್ಪಟ್ಟ ಹಾಕಿ ದೇವರ ದರ್ಶನ ಪಡೆದ ಕತ್ರಿನಾ ಅವರು ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕುಕ್ಕೆಗೆ ಸಾಮಾನ್ಯವಾಗಿ ಮದುವೆ ಆಗದವರು, ಮಕ್ಕಳಾಗದವರು ಹಾಗೂ ಚರ್ಮ ಸಮಸ್ಯೆಗಳಿಂದ ಬಳಲುತ್ತಿರುವವರು ಭಕ್ತರು ಭೇಟಿ ನೀಡುತ್ತಾರೆ. ಅನೇಕರು ಸರ್ಪ ಸಂಸ್ಕಾರ ಪೂಜೆ ಮಾಡಿಸಿ ದೋಷ ನಿವಾರಣೆ ಮಾಡಿಕೊಳ್ತಾರೆ. ಇದೀಗ ಬಾಲಿವುಡ್​ ನಟಿ ಕತ್ರಿನಾ ಕೈಫ್​ ಕೂಡ ಕುಕ್ಕೆ ಸುಬ್ರಹ್ಮಣ್ಯನ ಮೊರೆ ಹೋಗಿದ್ದು, ಸಂತಾನಕ್ಕಾಗಿ ನಟಿ ಸರ್ಪ ಸಂಸ್ಕಾರ ಪೂಜೆ ಮಾಡಿಸಿದ್ದಾರೆ ಎನ್ನಲಾಗ್ತಿದೆ. 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿರುವ ಬಾಲಿವುಡ್ ನಟಿ ಕತ್ರಿನಾ ಕೈಫ್​ ಅವರು ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಪೂಜೆ ನೆರವೇರಿಸಿದ್ದಾರೆ. ಆದಿ ಸುಬ್ರಹ್ಮಣ್ಯದ ಸರ್ಪಸಂಸ್ಕಾರ ಯಾಗಶಾಲೆಯಲ್ಲಿ ಇಂದು ಮತ್ತು ನಾಳೆ ಸುಬ್ರಹ್ಮಣ್ಯನಿಗೆ ಸೇವೆ ನೆರವೇರಿಸಲಿದ್ದಾರೆ. ಸಂತಾನಕ್ಕಾಗಿ ನಟಿ ಕತ್ರಿನಾ ಸುಬ್ರಹ್ಮಣ್ಯನ ಸ್ವಾಮಿಯ ಮೊರೆ ಹೋಗಿದ್ದಾರೆ ಎನ್ನಲಾಗ್ತಿದೆ.ಇತ್ತೀಚೆಗೆ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭಮೇಳಕ್ಕೂ ಕತ್ರಿನಾ ಕೈಫ್ ಭೇಟಿ ನೀಡಿದ್ದರು. ಮಹಾ ಕುಂಭಮೇಳದಲ್ಲಿ ಭಾಗಿಯಾದ ಕತ್ರಿನಾ ಕೈಫ್ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದರು.

See also  ನಟ ದರ್ಶನ್ ಹುಟ್ಟುಹಬ್ಬದ ದಿನವೇ ಅಭಿಮಾನಿಗಳು ಹಾಕಿದ್ದ ಬ್ಯಾನರ್ ಕಿತ್ತೆಸೆದ ಪುರಸಭೆ ಸಿಬ್ಬಂದಿ..! ಇಲ್ಲಿದೆ ಕಾರಣ
  Ad Widget   Ad Widget   Ad Widget   Ad Widget   Ad Widget   Ad Widget