ದೇಶ-ವಿದೇಶ

ರೈಲು ನಿಲ್ದಾಣದಲ್ಲಿ ಸ್ಪೋಟ, 20 ಮಂದಿ ಸಾವು, 30 ಕ್ಕೂ ಅಧಿಕ ಮಂದಿಗೆ ಗಾಯ, 20 ಮಂದಿ ಸಾವು, 30 ಕ್ಕೂ ಅಧಿಕ ಮಂದಿಗೆ ಗಾಯ

237

ನ್ಯೂಸ್ ನಾಟೌಟ್: ಭೀಕರ ಸ್ಫೋಟ ಸಂಭವಿಸಿ ಕನಿಷ್ಠ 20 ಮಂದಿ ಮೃತಪಟ್ಟು, 30 ಕ್ಕೂ ಅಧಿಕ ಮಂದಿಗೆ ಗಾಯಗೊಂಡ ಘಟನೆ ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ (ನ.9) ರಂದು ಸಂಭವಿಸಿದೆ.

ಪ್ರಯಾಣಿಕರನ್ನು ಹೊತ್ತ ರೈಲು ಪೇಶಾವರಕ್ಕೆ ಹೊರಡಲು ಸಿದ್ದವಾಗಿತ್ತು ಈ ವೇಳೆ ಸ್ಪೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ಕ್ವೆಟ್ಟಾ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಮೊಹಮ್ಮದ್ ಬಲೋಚ್ ಅವರು ಇದೊಂದು ಆತ್ಮಹತ್ಯಾ ದಾಳಿ ಎಂದು ಶಂಕೆ ವ್ಯಕ್ತಪಡಿಸಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಸ್ಪೋಟದಿಂದಾಗಿ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ನ ಶೀಟ್ ಗಳು ಛಿದ್ರಗೊಂಡಿದ್ದು ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂದು ಪಾಕ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

See also  ಮಳೆ ನೀರಿನಲ್ಲಿ ಆಟವಾಡುತ್ತಿರುವಾಗ ಚರಂಡಿಗೆ ಬಿದ್ದು ಕೊಚ್ಚಿ ಹೋದ 3 ವರ್ಷದ ಮಗು..! ಇಲ್ಲಿದೆ ಮನಕಲಕುವ ಘಟನೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget