ವೈರಲ್ ನ್ಯೂಸ್

ಬಾಂಬೆ ಮಿಠಾಯಿ ಮಾರಾಟ ನಿಷೇಧ..! ಮಕ್ಕಳ ನೆಚ್ಚಿನ ತಿನಿಸಿನಲ್ಲಿ ಅಂತದ್ದೇನಿದೆ..?

ನ್ಯೂಸ್‌ ನಾಟೌಟ್: ಕಡಿಮೆ ವೆಚ್ಚದ ತಿನಿಸು, ಜಾತ್ರೆಗಳಲ್ಲೂ ಮಕ್ಕಳ ಮನಸೆಳೆಯೊ ಬಾಂಬೆ ಮಿಠಾಯಿ ಕಳೆದ ಇಪ್ಪತ್ತು ವರ್ಷಗಳಿಂದ ಹೆಚ್ಚಾಗಿ ಮುನ್ನೆಲೆಗೆ ಬಂದ ಈ ತಿಸಿಸು ಎನ್ನಲಾಗಿದೆ. ನೋಡಲು ಆಕರ್ಷಕವಾಗಿದ್ದು, ದರವೂ ಕಡಿಮೆ ಇರುವುದರಿಂದ ಎಲ್ಲರ ಕೈಗೆಟುಕುವ ರುಚಿಯಾದ ಸಿಹಿ ತಿಂಡಿಗಳಲ್ಲಿ ಬಾಂಬೆ ಮಿಠಾಯಿ ಪ್ರಮುಖವಾಗಿತ್ತು. ಆದರೆ ಇದೀಗ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ವಿಷಕಾರಿ ರಾಸಾಯನಿಕಗಳ ಬಳಕೆಯನ್ನು ಆಹಾರ ಅಧಿಕಾರಿಗಳು ಪತ್ತೆಹಚ್ಚಿದ್ದು, ಪುದುಚೇರಿ ಸರ್ಕಾರವು ಕಳೆದ ವಾರದಿಂದ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಿದೆ.

ಸದ್ಯ ಪುದುಚೇರಿಯಲ್ಲಿ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗಿದೆ. ಬಾಂಬೆ ಮಿಠಾಯಿಯಲ್ಲಿ ಆರೋಗ್ಯಕ್ಕೆ ಹಾನಿಕರ­ವಾದ ರೊಡಮೈನ್‌-ಬಿ ಎಂಬ ವಿಷಕಾರಿ ಅಂಶ ಪತ್ತೆಯಾಗಿ­ರುವುದಾಗಿ ಆಹಾರ ಸುರಕ್ಷತಾ ಅಧಿಕಾರಿಗಳು ವರದಿ ನೀಡಿದ್ದಾರೆ. ಹೀಗಾಗಿ ಪುದುಚೇರಿಯಾದ್ಯಂತ ಇನ್ನು ಬಾಂಬೆ ಮಿಠಾಯಿ ಮಾರಾಟ ನಿಷೇಧಿಸಿರುವುದಾಗಿ ಲೆಫ್ಟಿನೆಂಟ್‌ ಗವರ್ನರ್‌ ತಮಿಳಿಸೈ ಸೌಂದರರಾಜನ್ ತಿಳಿಸಿದ್ದಾರೆ.

ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಮಕ್ಕಳಿಗೆ ಕಂಡಕಂಡಲ್ಲಿ ಕಾಟನ್‌ ಕ್ಯಾಂಡಿ ಕೊಡಿಸದಂತೆ ಹಾಗೂ ಖರೀದಿಸದಂತೆ ಜನರಿಗೆ ವಿನಂತಿಸಿಕೊಂಡಿದ್ದಾರೆ. ಏಕೆಂದರೆ ಅದರಲ್ಲಿ ಇರುವ ವಿಷಕಾರಿ ವಸ್ತುಗಳು ಮಕ್ಕಳ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ವಿವರಿಸಿದ್ದಾರೆ. ಬಾಂಬೆ ಮಿಠಾಯಿ ತಯಾರಿಕೆಯಲ್ಲಿ ಬಳಸುವ ರೋಡಮೈನ್ ಬಿ ಮಾನವರ ದೇಹಕ್ಕೆ ವಿಷಕಾರಿಯಾಗುತ್ತದೆ.

ಇದನ್ನು ಸೇವಿಸಿದರೆ ಜೀವಕೋಶಗಳು ಮತ್ತು ಅಂಗಾಂಶಗಳ ಮೇಲೆ ಆಕ್ಸಿಡೇಟಿವ್ ಒತ್ತಡವನ್ನು ಉಂಟುಮಾಡಬಹುದು. ಇದರ ಸೇವನೆ ಕಾಲಾನಂತರದಲ್ಲಿ ಯಕೃತ್ತು ಹಾನಿ, ಗೆಡ್ಡೆಗಳು ಮತ್ತು ಮಾರಣಾಂತಿಕ ಕಾಯಿಲೆ ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂದು ವರದಿ ತಿಳಿಸಿದೆ. ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ತಿಳಿಸಿರುವ ಪ್ರಕಾರ ‘ಸದ್ಯ ಕೇಂದ್ರಾಡಳಿತ ಪ್ರದೇಶದಲ್ಲಿ ಮಾರಾಟವಾಗುತ್ತಿದ್ದ ಕಾಟನ್ ಕ್ಯಾಂಡಿಯನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪರೀಕ್ಷಿಸಿದಾಗ ರೋಡಮೈನ್-ಬಿ ಎಂಬ ಹಾನಿಕಾರಕ ರಾಸಾಯನಿಕ ಅಂಶ ಕಂಡುಬಂದಿದೆ. ಹೀಗಾಗಿ ಜನರ ಆರೋಗ್ಯದ ದೃಷ್ಟಿಯ ಹಿನ್ನೆಲೆಯಲ್ಲಿ ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

https://newsnotout.com/2024/02/kannada-news-story-of-trafic-issue/

Related posts

ಖರೀದಿಸಿದ ತಕ್ಷಣ ಶೋರೂಂನ ಎದುರಿನ ಗುಂಡಿಗೆ ಬಿದ್ದ ಕಾರು..! ಆಕೆಗೆ ಡ್ರೈವಿಂಗ್ ಗೊತ್ತಿರಲಿಲ್ಲವೇ..? ಇಲ್ಲಿವೆ ವೈರಲ್ ವಿಡಿಯೋ

KSRTC ಬಸ್ ಕಿಟಕಿಯಲ್ಲಿ ಸಿಲುಕಿದ ಮಹಿಳೆಯ ತಲೆ..!ಅರ್ಧ ಗಂಟೆಗಳ ಕಾಲ ಒದ್ದಾಡಿದ ಮಹಿಳೆ..!‌

ನೀರು ಸಂಸ್ಕರಣಾ ಘಟಕದಲ್ಲಿ ಮುಳುಗಿ 3 ಮಕ್ಕಳು ಸಾವು..! ಏನಿದು ಪಾಲಿಕೆ ಅಧಿಕಾರಿಗಳ ಯೆಡವಟ್ಟು..?