ಬೆಂಗಳೂರು: ನಾಳೆ ಬೆಳಗ್ಗೆ ಹನ್ನೊಂದು ಗಂಟೆಗೆ ಬಸವರಾಜ್ ಬೊಮ್ಮಾಯಿ ಒಬ್ಬರೇ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ನ್ಯೂಸ್ ನಾಟೌಟ್ ಗೆ ಉನ್ನತ ಮೂಲಗಳು ಮಾಹಿತಿ ನೀಡಿದ್ದು ನಂತರ ದಿನದಲ್ಲಿ ಕ್ಯಾಬಿನೆಟ್ ಫೈನಲ್ ಆಗಲಿದೆ ಎಂದು ಹೇಳಲಾಗಿದೆ. ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಇದೇ ರೀತಿ ಆಗಿತ್ತು. ಇದೇ ವೇಳೆ ನಳೀನ್ ಕುಮಾರ್ ಕಟೀಲ್ ಮಾತನಾಡಿ ಸರ್ವ ಸಮಿತಿಯ ನಿರ್ಧಾರದ ಮೇರೆಗೆ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ಹಿರಿಯ ರಾಜಕಾರಣಿ ಅವರಿಂದ ರಾಜ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.