ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿಎಂ ಆಗಿ ಇಂದು ಬೊಮ್ಮಾಯಿ ಪ್ರಮಾಣವಚನ ಹಿನ್ನೆಲೆ ರಾಜಭವನದ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿಭದ್ರತೆ ಕೈಗೊಳ್ಳಲಾಗಿದ್ದು, ಡಿಸಿಪಿ, ಎಸಿಪಿ ಸೇರಿ 500ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ರಾಜಭವನದ ಗಾಜಿನಮನೆ ಈಗ ಕೇಸರಿ ಪಕ್ಷದ ನಾಯಕರಿಂದ ತುಂಬಿ ಹೋಗಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೂಡ ಆಗಮಿಸಿದ್ದಾರೆ. ಅವರ ಉತ್ತರಾಧಿಕಾರಿಯಾಗಿ ಬಸವರಾಜ ಬೊಮ್ಮಾಯಿ ಇನ್ನು ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.