ಕ್ರೈಂರಾಜ್ಯವೈರಲ್ ನ್ಯೂಸ್

ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ ನರ್ಸ್ ಅಮಾನತ್ತು..! ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದ್ದೇನು..?

381

ನ್ಯೂಸ್ ನಾಟೌಟ್: ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆಯ ಬದಲು ಫೆವಿಕ್ವಿಕ್ ಹಾಕಿದ್ದ ಹಾವೇರಿಯ ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ಅನ್ನು ಅಮಾನತ್ತು ಮಾಡಲಾಗಿದೆ.
ಜ್ಯೋತಿ ಅಮಾನತ್ತುಗೊಂಡ ನರ್ಸ್ ಎಂದು ಗುರುತಿಸಲಾಗಿದೆ.

ಜನವರಿ 14ರಂದು ಆಟ ಆಡುತ್ತಿದ್ದ ವೇಳೆ ಬಿದ್ದು ಏಳು ವರ್ಷದ ಬಾಲಕ ಗುರುಕಿಶನ್ ಕೆನ್ನೆಗೆ ಗಾಯವಾಗಿತ್ತು. ಈ ವೇಳೆ ಮಗುವನ್ನು ಆಡೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿ ನರ್ಸ್ ಜ್ಯೋತಿ ಬಾಲಕನ ಕೆನ್ನೆಯ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿ ಬ್ಯಾಂಡೆಡ್ ಅಂಟಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಬಗ್ಗೆ ವೀಡಿಯೊ ವೈರಲ್ ಆದ ಬೆನ್ನಲ್ಲೆ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ನರ್ಸ್ ಜ್ಯೋತಿಯನ್ನು ಅಮಾನತ್ತುಗೊಳಿಸಲಾಗಿದೆ. ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಮಗುವಿನ ಆರೋಗ್ಯದಲ್ಲಿ ಅಡ್ಡಪರಿಣಾಮಗಳ ಬಗ್ಗೆ ನಿಗಾ ಇಡಲು ಸೂಚನೆ ನೀಡಿದ್ದು, ಚಿಕಿತ್ಸೆಗೆ ಒಳಪಟ್ಟಿದ್ದ ಮಗು ಆರೋಗ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

See also  ಜಾಲ್ಸೂರು: ವಿಷ ಸೇವಿಸಿ 80 ವರ್ಷದ ವೃದ್ದ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget