ನ್ಯೂಸ್ ನಾಟೌಟ್ : ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ಫೇಲ್ ಆಗಿ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಗುದ್ದಿದ ಘಟನೆ ಬೆಂಗಳೂರಿನ ನಾಗದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ.
ಇಂದು(ಜ.19) ಬೆಳಗ್ಗೆ 6:27ರ ಸುಮಾರಿಗೆ ಬಸ್ ಶಿರ್ಕೆ ಸರ್ಕಲ್ ನಿಂದ ನಾಗರಭಾವಿ ಕಡೆ ಹೊರಟಿತ್ತು. ಈ ಸಮಯದಲ್ಲಿ ಬಸ್ ಅಪಘಾತ ನಡೆದಿದೆ ಎನ್ನಲಾಗಿದೆ. ಅಪಘಾತದ ವೇಳೆ ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಅವಘಡದಿಂದ ಬಸ್ ನಲ್ಲಿದ್ದ ಮೂವರು ಪ್ರಯಾಣಿಕರು ಕೆಲ ಸಮಯ ಆತಂಕಕ್ಕೆ ಒಳಗಾಗಿದ್ದರು. ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ವರದಿ ತಿಳಿಸಿದೆ.
Click