ಕರಾವಳಿಕ್ರೈಂರಾಜಕೀಯವೈರಲ್ ನ್ಯೂಸ್

ದ.ಕ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ವಿರುದ್ಧ ದೂರು..! ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಂಡ ಆರೋಪ

232

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮಕ್ಕಳನ್ನು ಚುನಾವಣೆಯ ಪ್ರಚಾರಕ್ಕೆ ಬಳಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹೀಗಾಗಿ ಬ್ರಿಜೇಶ್ ಚೌಟ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಸೂರ್ಯ ಮುಕುಂದರಾಜ್ ಎಲ್. ಆಗ್ರಹಿಸಿದ್ದಾರೆ.

ಸೋಮವಾರ(ಮಾ.25) ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿರುವ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾ.23ರಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಮಕ್ಕಳಿಗೆ ಬಿಜೆಪಿಯ ಶಾಲು ಹಾಕಿಸಿ ಚುನಾವಣೆಯ ಪ್ರಚಾರ ಮಾಡುತ್ತಿರುವ ಫೋಟೋ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಮಕ್ಕಳಿಂದ ಚುನಾವಣೆಯ ಪ್ರಚಾರ ಮಾಡಿಸುವುದು ಅವರ ಭಾವಚಿತ್ರ ಸಾರ್ವಜನಿಕಗೊಳಿಸುವುದು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಆರೋಪಿಯ ವಿರುದ್ಧ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

See also  ಈ ಮದುವೆಯಲ್ಲಿ ವಧು-ವರ ಇಬ್ಬರೂ ಇರ್ತಾರೆ..ಆದ್ರೆ ಕಾಣಿಸಲ್ಲ..! ಏನಿದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ನಡೆಯುವ ಪ್ರೇತಾತ್ಮಗಳ ವಿಚಿತ್ರ ವಿವಾಹ..?
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget