ಕ್ರೈಂರಾಜಕೀಯವೈರಲ್ ನ್ಯೂಸ್

ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್..! ಬಾಲಕಿ‌ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

235

ನ್ಯೂಸ್ ನಾಟೌಟ್: ಸಹಾಯ ಕೇಳಲು ಹೋಗಿದ್ದ 17 ವರ್ಷದ ಬಾಲಕಿ ಮೇಲೆ‌ ಲೈಂಗಿಕ‌ ದೌರ್ಜನ್ಯ ಎಸಗಿದ್ದ ಆರೋಪದಡಿ ಬಿ.ಎಸ್. ಯಡಿಯೂರಪ್ಪ (81) ಅವರ ವಿರುದ್ಧ‌ ಎಫ್ಐಆರ್ ದಾಖಲಾಗಿದೆ. ಬಾಲಕಿಯ ತಾಯಿ ನೀಡಿರುವ ದೂರಿನಡಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಗುರುವಾರ (ಮಾರ್ಚ್ 14) ಪ್ರಕರಣ ದಾಖಲಾಗಿದೆ. ‘ಮಕ್ಕಳ ಮೇಲಿನ ಲೈಂಗಿಕ‌ ದೌರ್ಜನ್ಯ ತಡೆ ಕಾಯ್ದೆಯಡಿ (ಪೋಕ್ಸೊ) ಪ್ರಕರಣ ದಾಖಲಾಗಿದೆ.

ಬಾಲಕಿಯ ತಾಯಿ ಗುರುವಾರ ರಾತ್ರಿ ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ. ಇದೇ ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿ‌ನಲ್ಲಿ ಆರೋಪಿಸಲಾಗಿದೆ. ‘ಮಗಳ ಮೇಲೆ ಅತ್ಯಾಚಾರ ಆಗಿತ್ತು. ಮಗಳಿಗೆ ನ್ಯಾಯ ಕೊಡಿಸುವಂತೆ ಹಾಗೂ ಪ್ರಕರಣದ ತನಿಖೆಗೆ ಎಸ್ಐಟಿ‌ ರಚಿಸುವಂತೆ ಸರ್ಕಾರದ‌ ಮೇಲೆ ಒತ್ತಡ ಹೇರುವಂತೆ ಕೋರಿ ಯಡಿಯೂರಪ್ಪ‌ ಬಳಿ ಹೋಗಿದ್ದೆ. ಅದೇ ಸಂದರ್ಭದಲ್ಲಿ ನನ್ನ 17 ವರ್ಷದ ಮಗಳ‌ ಮೇಲೆ ಯಡಿಯೂರಪ್ಪ ‌ಲೈಂಗಿಕ‌ ದೌರ್ಜನ್ಯ ಎಸಗಿದ್ದಾರೆ.

ವಿಷಯ ಯಾರಿಗೂ ತಿಳಿಸದಂತೆ ನನ್ನನ್ನು ತಡೆದಿದ್ದರು. ಬಾಲಕಿ ಭಯಗೊಂಡಿದ್ದರಿಂದ ತಡವಾಗಿ ಠಾಣೆಗೆ ಬಂದು ದೂರು ನೀಡುತ್ತಿದ್ದೇನೆ’ ಎಂದು ಬಾಲಕಿಯ ತಾಯಿ ದೂರಿನಲ್ಲಿ‌ ತಿಳಿಸಿದ್ದಾರೆ. ಇನ್ನು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್‌ ಅವರು, ತನಿಖೆ ನಡೆಸಿ ಸತ್ಯಾಸತ್ಯತೆ ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಬಿಎಸ್‌ವೈ ವಿರುದ್ದ ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಿ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಅದರ ಬಗ್ಗೆ ತನಿಖೆ ನಡೆಸುತ್ತಾರೆ. ಅವರು ಕೊಟ್ಟಿರುವ ದೂರಿನ ಬಗ್ಗೆ ತನಿಖೆ ಪೂರ್ಣಗೊಳ್ಳದೆ ಏನೂ ಹೇಳಲು ಆಗುವುದಿಲ್ಲ. ದೂರು ಕೊಟ್ಟ ಮಹಿಳೆಗೆ ಮಾನಸಿಕ ಸಮಸ್ಯೆ ಇದೆ ಎಂದು ಕೆಲವರು ಹೇಳುತ್ತಾರೆ. ಲೈಂಗಿಕ ಕಿರುಕುಳದ ಬಗ್ಗೆ ಟೈಪ್ ಮಾಡಿರುವ ದೂರನ್ನು ಅವರು ನೀಡಿದ್ದಾರೆ ಎಂದರು.

See also  ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಚೈನಾದ HMPV ವೈರಸ್ ಪತ್ತೆ..? ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget