ನ್ಯೂಸ್ ನಾಟೌಟ್: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಅಧಿಕೃತ ಅಧಿಸೂಚನೆಯ ಮೂಲಕ ಕಾನೂನು ಸಲಹೆಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 14 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.
03 ಕಾನೂನು ಸಲಹೆಗಾರ ಹುದ್ದೆಗಳು ಖಾಲಿ ಇದ್ದು, ದೆಹಲಿಯಲ್ಲಿ ಉದ್ಯೋಗ ಸ್ಥಳವೆಂದು ತಿಳಿಸಲಾಗಿದೆ. ತಿಂಗಳಿಗೆ ರೂ.75000/- ಸಂಬಳ ನೀಡುವುದಾಗಿ ಸಂಸ್ಥೆ ಹೇಳಿದೆ.
BSNL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ LLB ಪೂರ್ಣಗೊಳಿಸಿರಬೇಕು. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸಿನ ಮಿತಿ 32 ವರ್ಷಗಳು ಎನ್ನಲಾಗಿದೆ.
ಮೊದಲನೆಯದಾಗಿ BSNL ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ. ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.