ಬಿಎಸ್ ವೈ ಸುತ್ತ ಐಟಿ ಬಲೆ: ವಿಜಯೇಂದ್ರ ಆಪ್ತನ ಮನೆಯಿಂದ ದಾಖಲೆ ವಶ

4

ಬೆಂಗಳೂರು: ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮುಖ್ಯಮಂತ್ರಿ ಸಚಿವಾಲಯದ ಸಿಬ್ಬಂದಿಯೂ ಆಗಿರುವ ಆಯನೂರು ಉಮೇಶ್, 31 ಗುತ್ತಿಗೆದಾರರು ಹಾಗೂ ಐವರು ಲೆಕ್ಕ ಪರಿಶೋಧಕರ ಕಚೇರಿ, ಮನೆ ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ (ಐ.ಟಿ) ಅಧಿಕಾರಿಗಳು ಶೋಧ ನಡೆಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜಲ ಸಂಪನ್ಮೂಲ ಮತ್ತು ಲೋಕೋಪಯೋಗಿ ಇಲಾಖೆಗಳ ಬೃಹತ್ ಕಾಮಗಾರಿಗಳ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ತೆರಿಗೆ ವಂಚನೆ, ಅಕ್ರಮ ಹಣದ ವಹಿವಾಟು ನಡೆಸಿರುವ ಆರೋಪದ ಮೇಲೆ ಐ.ಟಿ ಇಲಾಖೆ ತನಿಖೆ ಆರಂಭಿಸಿದೆ. ಗುರುವಾರ ನಸುಕಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದ ಐ.ಟಿ ಇಲಾಖೆಯ ಬೆಂಗಳೂರು ಮತ್ತು ಗೋವಾ ಇಲಾಖೆಯ ಅಧಿಕಾರಿಗಳು, ತಡರಾತ್ರಿಯವರೆಗೂ ಶೋಧ ಮುಂದುವರಿಸಿದ್ದರು.

ಬೆಂಗಳೂರು ನಗರ, ಬೀದರ್, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಐ.ಟಿ. ಅಧಿಕಾರಿಗಳಿಂದ ಶೋಧ ನಡೆದಿದೆ. ದಾಳಿಗೊಳಗಾಗಿರುವ ಗುತ್ತಿಗೆದಾರರ ಪೈಕಿ ಹಲವರು ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಮತ್ತು ಕೆಲವು ಸಚಿವರಿಗೆ ನಿಕಟವರ್ತಿಗಳು. ಉಮೇಶ್, ಅರವಿಂದ್, ಪ್ರಸನ್ನ ಸೇರಿದಂತೆ ಯಡಿಯೂರಪ್ಪ ಕುಟುಂಬದ ಜತೆ ನಿಕಟವಾಗಿದ್ದ ಹಲವರ ಮನೆ, ಕಚೇರಿಗಳಲ್ಲಿ ಶೋಧ ನಡೆದಿದೆ. 2019ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಜಲ ಸಂಪನ್ಮೂಲ ಮತ್ತು ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿರುವ ರೂ. 25 ಕೋಟಿಗಿಂತ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದ ವಹಿವಾಟುಗಳ ಪರಿಶೀಲನೆಗಾಗಿ ಈ ಶೋಧ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬೃಹತ್ ಕಾಲುವೆಗಳು, ಸೇತುವೆಗಳು, ರಸ್ತೆಗಳ ಕಾಮಗಾರಿಗಳು ಮತ್ತು ಒಂದು ವಿಮಾನ ನಿಲ್ದಾಣ ನಿರ್ಮಾಣದ ಕಾಮಗಾರಿ ಗುತ್ತಿಗೆ ಪಡೆದಿರುವ ವ್ಯಕ್ತಿಗಳನ್ನೇ ಕೇಂದ್ರೀಕರಿಸಿ ಶೋಧ ನಡೆಸಲಾಗಿದೆ. ದಾಳಿಗೊಳಗಾದ ಗುತ್ತಿಗೆದಾರರ ಪೈಕಿ ಕೆಲವರು ಉತ್ತರ ಕರ್ನಾಟಕದ ಪ್ರಭಾವಿ ರಾಜಕಾರಣಿಗಳಿಗೆ ನಿಕಟವರ್ತಿಗಳಾಗಿದ್ದಾರೆ. ಉಮೇಶ್ ಈ ಕಾಮಗಾರಿಗಳ ಗುತ್ತಿಗೆ ಪಡೆಯಲು ಗುತ್ತಿಗೆದಾರರು ಮತ್ತು ಅವರ ನಿಕಟವರ್ತಿಗಳಿಗೆ ನೆರವಾಗಿರುವ ಆರೋಪದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

Related Articles

Latestಕ್ರೈಂದೇಶ-ಪ್ರಪಂಚದೇಶ-ವಿದೇಶರಾಜ್ಯ

ತಲೆಗೆ ಗುಂಡು ತಗುಲಿ ಕರ್ನಾಟಕ ಮೂಲದ ಯೋಧ ಸಾವು..! ‘ಮಿಸ್‌ಫೈರ್‌’ ಎಂದ ಸೇನಾಧಿಕಾರಿ..!

ನ್ಯೂಸ್‌ ನಾಟೌಟ್: ಬೆಳಗಾವಿಯ ಮೂಡಲಗಿ ತಾಲೂನಿನ ಕಲ್ಲೋಳಿಯ ಯೋಧ ಪ್ರವೀಣ ಸುಭಾಷ ಖಾನಗೌಡ್ರ (24) ಬುಧವಾರ...

Latestಕೊಡಗುಕ್ರೈಂ

ಕೊಡಗು: 14 ದಿನದ ಶಿಶುವಿನ ತಾಯಿ ಆತ್ಮಹತ್ಯೆ..! ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್‌ ನಾಟೌಟ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ...

Latestಕ್ರೈಂಬೆಂಗಳೂರು

ಮಹಿಳಾ ಎಸಿಪಿ ಜತೆ ಪೊಲೀಸ್ ಅಧಿಕಾರಿಯ ಲವ್ವಿಡವ್ವಿ..! ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೇಸ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ, ತಮ್ಮ ಪತಿ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ...

Latestಕ್ರೈಂಬೆಂಗಳೂರು

ಹೆಂಡತಿಯ ಬಾಯಿಗೆ ಅಂಟು ದ್ರಾವಣ ಸುರಿದು ಕೊಲ್ಲಲು ಯತ್ನ..! ಗಂಡ ಅರೆಸ್ಟ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ...

@2025 – News Not Out. All Rights Reserved. Designed and Developed by

Whirl Designs Logo