ಕರಾವಳಿ

ಬುರ್ಕಾ ಧರಿಸಿ ಐಟಂ ಹಾಡಿಗೆ ಮುಸ್ಲಿಂ ವಿದ್ಯಾರ್ಥಿಗಳ ಡ್ಯಾನ್ಸ್‌..!

493

ನ್ಯೂಸ್ ನಾಟೌಟ್ : ಕೆಲವು ತಿಂಗಳ ಹಿಂದೆ ರಾಜ್ಯಾದ್ಯಂತ ಹಿಜಾಬ್ ವಿವಾದ ಕಿಚ್ಚು ಹೊತ್ತಿಸಿತ್ತು. ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಇಲ್ಲೊಂದು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಹಾಡಿಗೆ ಡ್ಯಾನ್ಸ್‌ ಮಾಡಿ ವಿವಾದಕ್ಕೆ ಸಿಲುಕಿದ್ದಾರೆ. ಈ ಘಟನೆ ಮಂಗಳೂರಿನ ವಾಮಂಜೂರು ಸೇಂಟ್ ಜೋಸೆಫ್‌ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.

ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯಕ್ರಮದಲ್ಲಿ 4 ಮುಸ್ಲಿಂ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್ ಗೆ ನೃತ್ಯ ಮಾಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ನೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕಾಲೇಜಿನ ಪ್ರಾಂಶುಪಾಲ ಡಾ. ಸುಧೀರ್ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ್ದಾರೆ. ನೃತ್ಯ ಮಾಡಿದ ವಿದ್ಯಾರ್ಥಿಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

See also  ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಎರಗಿದ ಕಾಮುಕ..! ಇಲ್ಲಿದೆ ಸಿಸಿಟಿವಿ ದೃಶ್ಯ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget