ಕರಾವಳಿಕ್ರೈಂ

ಮೂಡುಬಿದಿರೆ: ಬೈಕ್‌ಗೆ ಬಸ್‌ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ನ್ಯೂಸ್‌ ನಾಟೌಟ್‌: ಮಂಗಳೂರು ಕಾರ್ಕಳ ರಾಷ್ಟ್ರೀಯ  ಹೆದ್ದಾರಿಯ ಮೂಡುಬಿದಿರೆ ಸಮೀಪದ ತೋಡಾರಿನ ಹಂಡೇಲು ಎಂಬಲ್ಲಿ ಖಾಸಗಿ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ, ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಾಯಂಕಾಲ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ (19), ಎಡಪದವು ರಾಜೇಶ್ವರಿ ಜ್ಯುವೆಲರ್ಸ್‌ನ ಚಂದ್ರಹಾಸ ಆಚಾರ್ಯ ಅವರ ಪುತ್ರ ಎಂದು ಗುರುತಿಸಲಾಗಿದೆ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಎಂಬವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ. ಕಾರ್ತಿಕ್ ಅವರು ಕಾಲೇಜು ಮುಗಿಸಿ ತನ್ನ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಮತ್ತೊಂದು ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಬೈಕ್‌ಗೆ  ಡಿಕ್ಕಿ ಹೊಡೆದಿದೆ. ಕಾರ್ತಿಕ್ ಹೆಲ್ಮೆಟ್ ಧರಿಸಿದ್ದರೂ ಬಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆ ಅಮಾಯಕ ಜೀವ ಬಲಿಯಾಗಿದೆ. ಮೂಡುಬಿದಿರೆ ಪೊಲೀಸರು ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Related posts

ಬಾಡಿಗೆ ಮನೆಯವರಿಗೆ ಉಚಿತ ವಿದ್ಯುತ್ ಇಲ್ಲ..! ಅವಶ್ಯಕತೆ ಇರುವ ಬಡವರಿಗೆ ಇದೆಂಥಾ ಅನ್ಯಾಯ…?

ಸ್ವಕ್ಷೇತ್ರದಲ್ಲಿ ರಾಹುಲ್ ಗಾಂಧಿಗೆ ಶಾಕ್..! ಮೋದಿ ಗೆಲ್ಲಬೇಕು ಎಂದ ಕಾಂಗ್ರೆಸ್ ನ ಜಿಲ್ಲಾ ಕಾರ್ಯಾದರ್ಶಿ..!

Titanic ಸಬ್​ಮೆರಿನ್ ದುರಂತ! ಟೈಟಾನಿಕ್ ಸಿನಿಮಾ ರಿ-ರಿಲೀಸ್​ಗೆ ಮುಂದಾದ ನೆಟ್​ಫ್ಲಿಕ್ಸ್!​ ನೆಟ್ಟಿಗರು ಟೀಕಿಸಿದ್ದೇಕೆ?