Latestಕ್ರೈಂರಾಜ್ಯ

ಬಸ್‍ ನಲ್ಲಿ ಕಿಟಕಿ ಪಕ್ಕದ ಸೀಟಿಗಾಗಿ ಚಾಕು ಇರಿದ ಅಪ್ರಾಪ್ತರು..! ಇಬ್ಬರು ಅರೆಸ್ಟ್..!

387

ನ್ಯೂಸ್ ನಾಟೌಟ್: ಬಸ್‍ ನಲ್ಲಿ ಕಿಟಕಿ ಪಕ್ಕದ ಸಿಟಿಗಾಗಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದಾರೆ.

ಜೂ.18 ಪಂತ ಬಾಳೇಕುಂದ್ರಿ ಎಂಬಲ್ಲಿಯ ಬಸ್‍ ನಲ್ಲಿ ಕಿಟಕಿ ಪಕ್ಕದ ಸಿಟಿಗಾಗಿ ಬಂಧಿತ ಅಪ್ರಾಪ್ತ ಬಾಲಕ ಹಾಗೂ ಯುವಕ ಮಾಜ್ ಸನದಿ (20) ಮಧ್ಯೆ ಗಲಾಟೆಯಾಗಿತ್ತು. ಈ ವೇಳೆ ಬಾಲಕ, ಕೇಂದ್ರ ಬಸ್ ನಿಲ್ದಾಣಕ್ಕೆ ತನ್ನ ಸ್ನೇಹಿತನನ್ನು ಕರೆಸಿಕೊಂಡು ಮಾಜ್ ಸನದಿಗೆ ಚಾಕು ಇರಿದಿದ್ದಾನೆ ಎನ್ನಲಾಗಿದೆ. ಬಳಿಕ ಅಲ್ಲಿಂದ ಇಬ್ಬರು ಪರಾರಿಯಾಗಿದ್ದರು.

ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಘಟನೆ ನಡೆಯುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಅಪ್ರಾಪ್ತರನ್ನು ಬಂಧಿಸಿದ್ದೇವೆ. ಇನ್ನೂ ಮುಂದೆ ಇಂತಹ ಅಪರಾಧ ತಡೆಗೆ ವಿಶೇಷ ತಂಡ ರಚನೆ ಮಾಡಿದ್ದೇವೆ. ಮಾರ್ಕೆಟ್ ಪ್ರದೇಶ, ಸಾರ್ವಜನಿಕವಾಗಿ ಮಾರಕಾಸ್ತ್ರಗಳ ಹಿಡಿದು ಓಡಾಡುವುದು, ವಾಹನಗಳಲ್ಲಿ, ಬ್ಯಾಗ್‍ ಗಳಲ್ಲಿ ಇಟ್ಟುಕೊಂಡು ಓಡಾಡುವುದು ಕಂಡು ಬಂದರೆ, ಅವರನ್ನ ಕೂಡಲೇ ಬಂಧಿಸುತ್ತೇವೆ. ಅಂತವರ ಮೇಲೆ ರೌಡಿಶೀಟರ್ ತೆರೆರೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಂಟ್ವಾಳ : ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿಯ ಮೃತದೇಹಗಳು ಮನೆಯೊಳಗೆ ಪತ್ತೆ..!ಸೀಮಂತದ ದಿನಾಂಕವೂ ನಿಗದಿಯಾಗಿತ್ತು..!

ಇರಾನ್‌ ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳು ದೆಹಲಿಗೆ ಬಂದ ನಂತ್ರ ಕಳಪೆ ಬಸ್ಸು ನೀಡಿದ್ದಾರೆ ಎಂದು ಆಕ್ರೋಶ..! ಇಲ್ಲಿದೆ ವಿಡಿಯೋ

See also  ಕದ್ದ ಹಣದಲ್ಲಿ ಗೆಳತಿಯರನ್ನು ಕುಂಭಮೇಳಕ್ಕೆ ಕರೆದೊಯ್ದ ಯುವಕರು..! ಹಿಂತಿರುಗಿ ಬರುವಾಗ ರೈಲ್ವೆ ನಿಲ್ದಾಣದಲ್ಲಿ ಅರೆಸ್ಟ್..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget