ಕರಾವಳಿ

ಸುಳ್ಯದಿಂದ ಮಂಗಳೂರಿಗೆ ಹೊರಟ ಬಸ್‌ನಲ್ಲಿ ಯುವತಿಗೆ ಕಿರುಕುಳ

ಸುಳ್ಯ: ಸುಳ್ಯದಿಂದ ಮಂಗಳೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಹೊರಟಿದ್ದ ವೇಳೆ ಯುವತಿಯೊಬ್ಬರಿಗೆ ಪಕ್ಕದ ಸೀಟಿನಲ್ಲಿ ಕುಳಿತ ವ್ಯಕ್ತಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಯುವತಿ ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ಬಂಧಿತನನ್ನು ವಾಜಿದ್ ಎ ಜಮಖಾನಿ ಹಾವೇರಿ ಜಿಲ್ಲೆ ಎಂದು ಗುರುತಿಸಲಾಗಿದೆ. ಸುಳ್ಯದಿಂದ ಮಂಗಳೂರಿಗೆ ಮಾ.೧೯ ರಂದು ಮಧ್ಯಾಹ್ನ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಯುವತಿ ಬರುತ್ತಿದ್ದ ವೇಳೆ ಆರೋಪಿ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ‌ಎನ್ನಲಾಗಿದೆ. ಇದರಿಂದ ನೊಂದ ಯುವತಿ ಆರೋಪಿಯ ವಿರುದ್ಧ ಮಾನಹಾನಿ ಮಾಡಿ ಕಿರುಕುಳ ನೀಡಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Related posts

ಸುಳ್ಯ: ನೀರಿಗೆ ಬಿದ್ದು ವೃದ್ಧ ಸಾವು..! ಕಾರಣ ನಿಗೂಢ..!

ಸುಳ್ಯ: ಬ್ಯಾಂಕ್ ಆಫ್ ಬರೋಡಾ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್, ರೋಚಕ ಫೈನಲ್ ನಲ್ಲಿ ಮುಗ್ಗರಿಸಿದ ಯೇನೆಪೋಯ ಯೂನಿವರ್ಸಿಟಿ

ಕಂದಮ್ಮನಿಗೆ ಜನ್ಮ ನೀಡಿ ಪ್ರಾಣ ಬಿಟ್ಟ ತಾಯಿ