ಕ್ರೈಂದೇಶ-ವಿದೇಶ

ಬಸ್ ಪ್ರಪಾತಕ್ಕೆ ಬಿದ್ದು 23 ಮಂದಿ ಸಾವು..! ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ ಮುಖ್ಯಮಂತ್ರಿ..!

ನ್ಯೂಸ್ ನಾಟೌಟ್: ಉತ್ತರಾಖಂಡದ ಅಲ್ಮೋರಾದಲ್ಲಿ ಬಸ್ ಪ್ರಪಾತಕ್ಕೆ ಬಿದ್ದ ಪರಿಣಾಮ ಕನಿಷ್ಠ 23 ಮಂದಿ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಇಂದು(ಅ.4) ನಡೆದಿದೆ.

ಅಪಘಾತದ ವೇಳೆ 40ಕ್ಕೂ ಅಧಿಕ ಮಂದಿ ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF)ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ಹೇಳಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘಟನೆ ಬಗ್ಗೆ ಆಘಾತವನ್ನು ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 1ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಕುಮಾನ್ ವಿಭಾಗದ ಆಯುಕ್ತರಿಗೆ ಸೂಚಿಸಿದ್ದಾರೆ.

Related posts

ಕಾರು ಅಡ್ಡ ಹಾಕಿದ್ದಕ್ಕೆ ಬ್ಯಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿಯನ್ನೇ ಎಳೆದೊಯ್ದ ಚಾಲಕ..! ಇಲ್ಲಿದೆ ವೈರಲ್ ವಿಡಿಯೋ

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವರನ್ನು ಬಂಧಿಸಲಾಗುವುದು ಎಂದ ಗೃಹಸಚಿವ..! ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ಯಾಂಡಲ್‌ವುಡ್‌ನ ಖ್ಯಾತ ನಟನ ಬಂಧನ..! ನಟ ತಪ್ಪೊಪ್ಪಿಕೊಂಡು, ಹಣ ಪಾವತಿಸುತ್ತೇನೆ ಎಂದದ್ದೇಕೆ?