ಕ್ರೈಂ

ಉದ್ಯಮಿ ಹತ್ಯೆಗೆ ಸಂಚು ರೂಪಿಸಿದ್ದ ಎಂಟು ಆರೋಪಿಗಳ ಬಂಧನ

ಯಲ್ಲಾಪುರ: ಉದ್ಯಮಿಯ ಮನೆಗೆ ಹೋಗಿ ಹಲ್ಲೆ ನಡೆಸಿದ್ದಲ್ಲದೇ ಅವರ ಹತ್ಯೆಗೆ ಸಂಚು ಹೂಡಿದ ಆರೋಪದ ಮೇಲೆ ಎಂಟು ಮಂದಿ ಆರೋಪಿಗಳನ್ನು ಯಲ್ಲಾಪುರ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ.

ಪಟ್ಟಣದ ಸಬಗೇರಿ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಸುರೇಶ ರೇವಣಕರ್ ಎಂಬುವವರ ಮನೆಗೆ ಶುಕ್ರವಾರ ರಾತ್ರಿ ಕೆಲವು ಅಪರಿಚಿತರು ಬಂದು ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಅವರ ಮೇಲೆ ಹಲ್ಲೆ ನಡೆಸಿ ಮೊಬೈಲ್ ಫೋನ್ ಕಿತ್ತುಕೊಂಡು ಹೋದ ಬಗ್ಗೆ ಸುರೇಶ ಅವರು ಯಲ್ಲಾಪುರ ಠಾಣೆಗೆ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಭಾನುವಾರ ಎಂಟು ಜನ ಆರೋಪಿಗಳನ್ನು ಬಂಧಿಸಿದ್ದಾರೆ. 

Related posts

ಅಯೋಧ್ಯೆಯಲ್ಲಿ 4 ವರ್ಷದ ಬಾಲಕಿ ಮೇಲೆ ಮೊಹಮ್ಮದ್ ಸಲ್ಮಾನ್ ಎಂಬಾತನಿಂದ ರೇಪ್..! ರಾತ್ರಿ ಬೆಳಗಾಗುವುದರೊಳಗೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..!

ಮಗಳನ್ನು ಸೊಂಟಕ್ಕೆ ಕಟ್ಟಿ ಕೆರೆಗೆ ಹಾರಿದ ತಾಯಿ..! ಐತಿಹಾಸಿಕ ಪ್ರವಾಸಿ ತಾಣದಲ್ಲಿ 5 ವರ್ಷದ ಮಗುವಿನ ದುರಂತ ಅಂತ್ಯಕ್ಕೆ ಕಾರಣವೇನು?

ರಶ್ಮಿಕಾ ಮಂದಣ್ಣ ವಿಡಿಯೋ ಡೀಪ್‌ಫೇಕ್ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ರಾ..? ಈ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು?