ಕರಾವಳಿಬೆಂಗಳೂರುರಾಜಕೀಯರಾಜ್ಯ

ವಿಜಯೇಂದ್ರ ಇನ್ನೂ ಎಳಸು, ನಾವು ಪಕ್ಷ ಕಟ್ಟಿದ್ದಾಗ ಅವ ಇನ್ನೂ ಕಣ್ಣು ಬಿಟ್ಟಿರಲಿಲ್ಲ ಎಂದ ಈಶ್ವರಪ್ಪ..! ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಸ್ಥಾಪನೆಗೆ ಮುಂದಾದ ಬಿಜೆಪಿಯ ಬಂಡಾಯ ಮುಖಂಡ..!

245

ನ್ಯೂಸ್ ನಾಟೌಟ್: ಹಿಂದೂಳಿದ, ದಲಿತ ಸೇರಿದಂತೆ ಎಲ್ಲ ಸಮಾಜದವರ ಒಟ್ಟಾಗಿಸಲು ಮತ್ತೆ ಕೆಎಸ್ ಈಶ್ವರಪ್ಪ ಆರ್‌ಸಿಬಿ (ರಾಯಣ್ಣ ಚೆನ್ನಮ್ಮ ಬ್ರಿಗೇಡ್) ಸಂಘಟನೆ ಮಾಡುತ್ತಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ವಿಜಯೇಂದ್ರ ಈಶ್ವರಪ್ಪ ಅವರನ್ನು ಕೆಣಕಿದ್ದಾರೆ. ಹಾಗಾಗಿ ಈಶ್ವರಪ್ಪ ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಹಿಂದೂಳಿದ, ದಲಿತ ಸೇರಿದಂತೆ ಎಲ್ಲ ಸಮಾಜದವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯಾಗಲು ಸಾಧು ಸಂತರ ನೇತೃತ್ವದಲ್ಲಿ ರಾಯಣ್ಣ, ಚೆನ್ನಮ್ಮ ಬ್ರಿಗೇಡ್ (RCB) ಸಂಘಟನೆಯನ್ನು ಹುಟ್ಟುಹಾಕಲು ಚಿಂತಿಸಲಾಗಿದೆ. ಅ.20 ರಂದು ಬಾಗಲಕೋಟೆಯಲ್ಲಿ ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಠೇವಣಿ ಕಳೆದುಕೊಂಡವರು ಸಂಘಟನೆ ಕಟ್ಟುತ್ತಿದ್ದಾರೆ ಎಂಬ ವಿಜಯೇಂದ್ರ ಹೇಳಿಕೆಗೆ ಕಿಡಿಕಾರಿರುವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ರಾಜಕೀಯದಲ್ಲಿ ಇನ್ನು ಎಳಸು. ನಾವೆಲ್ಲರೂ ಪಕ್ಷವನ್ನು ಕಟ್ಟುವ ಸಂದರ್ಭದಲ್ಲಿ ವಿಜಯೇಂದ್ರ ಕಣ್ಣು ಬಿಟ್ಟಿದ್ದಿಲ್ಲ. ಬಿಜೆಪಿಯನ್ನು ಅನೇಕರು ಶ್ರಮವಹಿಸಿ ಕಟ್ಟಿದ ಮೇಲೆ ಮೋದಿ, ಅಮಿತ್ ಷಾ ಕೃಪಕಟಾಕ್ಷದಿಂದ, ಹೈಕಮಾಂಡ್ ಗೆ ಮಂಕುಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ‌. ವಿಜಯೇಂದ್ರ ಕೈಯಲ್ಲಿ ಇದೀಗ ಪಕ್ಷ ಇವರ ಕೈಯಲ್ಲಿ ಸಿಕ್ಕು ಹಾಳಾಗುತ್ತಿದೆ ಎಂದು ಕಿಡಿಕಾರಿದರು.

Click

https://newsnotout.com/2024/10/mangaluru-kannada-news-mumthaj-ali-kannada-news-fir-kannada-news/
https://newsnotout.com/2024/10/viral-video-school-students-kannada-news-viral-news-issue/
https://newsnotout.com/2024/10/ratan-tata-kannada-news-icu-treatment-kannada-news/
https://newsnotout.com/2024/10/alone-women-kannada-news-briton-court-theef-viral-news/
See also  ಸಂಪಾಜೆ:ಕೇರಳ ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಳ ಹಿನ್ನಲೆ,ಮತ್ತೆ ಚುರುಕುಪಡೆದ ಕೋವಿಡ್ ತಪಾಸಣೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget