ಬೆಂಗಳೂರುರಾಜಕೀಯರಾಜ್ಯವೈರಲ್ ನ್ಯೂಸ್

ಉಪಚುನಾವಣೆ ಹೊಸ್ತಿಲಲ್ಲಿ ಮಿಡ್‌ನೈಟ್‌ ಆಪರೇಷನ್‌ ಸಕ್ಸಸ್‌,ಯೋಗೇಶ್ವರ್‌ ಕಾಂಗ್ರೆಸ್‌ ಗೆ ಸೇರ್ಪಡೆ..!ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ರಾಜಕೀಯ ರಣತಂತ್ರ..!

234

ನ್ಯೂಸ್ ನಾಟೌಟ್ : ಉಪಚುನಾವಣೆಯ ಹೊಸ್ತಿಲಲ್ಲಿ ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದ್ದು ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿದ್ದರು.

ಸಿಪಿ ಯೋಗೇಶ್ವರ್‌ ಅವರನ್ನು ಜೆಡಿಎಸ್‌ನಿಂದಲೇ ಸ್ಪರ್ಧೆ ಮಾಡಿಸಲು ಬಿಜೆಪಿ ಮುಂದಾಗಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಸಹ ಕಸರತ್ತು ನಡೆಸಿತ್ತು ಎನ್ನಲಾಗಿದೆ. ಯೋಗೀಶ್ವರ್ ಗೆ ಮೊದಲಿನಿಂದಲೂ ಜೆಡಿಎಸ್ ಮತ್ತು ಹೆಚ್.ಡಿ.ಕೆ ಮಧ್ಯೆ ಮನಸ್ತಾಪಗಳಿತ್ತು ಮತ್ತು ರಾಜಕೀಯ ತಿಕ್ಕಾಟಗಳಿದ್ದವು. ಹಾಗಾಗಿ ಜೆಡಿಎಸ್ ನಿಂದ ಸ್ಪರ್ಧಿಸಲು ಸಿಪಿ ಯೋಗೀಶ್ವರ್ ಅಸಮಾಧಾನ ತೋರಿದ್ದರು ಎನ್ನಲಾಗಿದೆ.

ಈ ಹಿಂದೆ ಜೆಡಿಎಸ್‌ನಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನನ್ನನ್ನು ಪಕ್ಷಾಂತರಿ ಎಂದು ಕರೆಯುತ್ತಿದ್ದಾರೆ. ಮತ್ತೆ ನಾನು ಬೇರೆ ಪಕ್ಷದ ಚಿಹ್ನೆಯ ಅಡಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಯೋಗೇಶ್ವರ್‌ ನಿರ್ಣಯ ಏನಿರಬಹುದು ಎಂಬ ಕುತೂಹಲ ಹೆಚ್ಚಾಗಿತ್ತು.
1999ರಲ್ಲಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿದ್ದ ಯೋಗೇಶ್ವರ್‌ 2004 ಮತ್ತು 2008 ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. 2013 ರಲ್ಲಿ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿದ್ದ ಯೋಗೇಶ್ವರ್‌ 2018 ಮತ್ತು 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ಸೋತಿದ್ದರು. ಆ ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಗಳಿವೆ.

See also  ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ..! ದೇಗುಲದ ಮೆಟ್ಟಿಲ ವರೆಗೆ ಆವರಿಸಿದ ನೀರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget