ಚಿಕ್ಕಮಗಳೂರು

ಚಿಕ್ಕಮಗಳೂರು: ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಕಾಫಿತೋಟಕ್ಕೆ ಪಲ್ಟಿಯಾದ ಕಾರು, ಕಾರಿನಲ್ಲಿದ್ದ ನಾಲ್ವರಿಗೆ ಗಾಯ

184

ನ್ಯೂಸ್‌ ನಾಟೌಟ್‌: ನಿಯಂತ್ರಣ ತಪ್ಪಿದ ಆಲ್ಟೋ ಕಾರೊಂದು ಹೆದ್ದಾರಿಯಿಂದ ಮುಂದೆ ಸಾಗಿ ಪಕ್ಕದಲ್ಲಿದ್ದ ಕಾಫಿತೋಟಕ್ಕೆ ಪಲ್ಟಿಯಾದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಕೊಟ್ಟಿಗೆಹಾರದಿಂದ ಬಾಳೂರಿಗೆ ತೆರಳುತ್ತಿತ್ತು. ಈ ಸಂದರ್ಭ ಮೂಡಿಗೆರೆ ತಾಲೂಕಿನ ಬಾಳೂರಿನ ರಾಜ್ಯ ಹೆದ್ದಾರಿ ಪಕ್ಕ ಇರುವ ಅಜ್ಜಿ ಕುಡಿಗೆ ತೋಟಕ್ಕೆ ಕಾರು ಪಲ್ಟಿಯಾಗಿ ಬಿದ್ದಿದೆ.

ಘಟನೆಯ ರಭಸಕ್ಕೆ ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಕಾರು ಪಲ್ಟಿಯಾಗಿ ಜಖಂಗೊಂಡಿದೆ ಎಂದು ತಿಳಿದುಬಂದಿದೆ.

See also  ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ..! ಕಳೆದ ವರ್ಷ 132 ಜನರಿಗೆ ಬಾಧಿಸಿದ್ದ ಖಾಯಿಲೆ 4 ಜನರನ್ನು ಬಲಿ ಪಡೆದಿತ್ತು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget