ಬೆಳ್ಳಾರೆ ಸಮೀಪದ ದರ್ಖಾಸ್ತು ಎಂಬಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಸುಳ್ಯ ಕಡೆಯಿಂದ ಬೆಳ್ಳಾರೆ ಕಡೆಗೆ ಹೋಗುವ ಮಣಿಮಜಲಿನವರು ಪ್ರಯಾಣಿಸುತ್ತಿದ್ದ ಕಾರು ದರ್ಖಾಸ್ತುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗಿಳಿದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಎದುರು ಭಾಗ ಜಖಂಗೊಂಡಿದ್ದು ವಿದ್ಯುತ್ ಕಂಬ ತುಂಡಾಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.