ನ್ಯೂಸ್ ನಾಟೌಟ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗುಂಡಿಗೆ ಬಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ಪರ್ಲಡ್ಕ ಬೈಪಾಸ್ ರಸ್ತೆಯಲ್ಲಿ ಇದೀಗ ಸಂಭವಿಸಿದೆ. ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದು, ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದಾರೆ. ಮೃತದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.