ನ್ಯೂಸ್ ನಾಟೌಟ್ : ಬೆಂಗಳೂರಿನ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆದ ಪ್ರಕರಣ ಇಂದು(ಡಿ.25) ನಡೆದಿದೆ.
ಲಕ್ಷ್ಮೀದೇವಿ ನಗರ ವಾರ್ಡ್ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಮುನಿರತ್ನ ಮೇಲೂ ಮೊಟ್ಟೆ ಎಸೆಯಲಾಗಿದೆ. ತಮ್ಮ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮುಂದಾಗಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ.
ಸ್ಥಳಕ್ಕೆ ನಂದಿನಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಂತರ ರಸ್ತೆಯಲ್ಲೇ ಕುಳಿತು ಶಾಸಕ ಮುನಿರತ್ನ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ನಂದಿನಿ ಲೇಔಟ್ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಈ ಮಧ್ಯೆ ಮುನಿರತ್ನ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಾರನ್ನು ಜಖಂಗೊಳಿಸಿರುವ ಆರೋಪ ಕೇಳಿಬಂದಿದೆ. ಸ್ಥಳದಿಂದ ಬಿಜೆಪಿ ಶಾಸಕ ಮುನಿರತ್ನ ತೆರಳಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು, ಮುನಿರತ್ನ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, 2-3 ಕಾರುಗಳು ಜಖಂಗೊಂಡಿವೆ. ಹಲವರು ಗಾಯಗೊಂಡಿದ್ದಾರೆ.
Click