ಕರಾವಳಿಕ್ರೈಂಪುತ್ತೂರುವೈರಲ್ ನ್ಯೂಸ್

ರಸ್ತೆ ಮಧ್ಯೆ ಹೊತ್ತಿ-ಉರಿದ ಕಾರು..! 1 ಗಂಟೆಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಸಂಚಾರ ಸ್ಥಗಿತ

162

ನ್ಯೂಸ್ ನಾಟೌಟ್: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದಕ್ಕೆ ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಸೋಮವಾರ ಬೆಳಗ್ಗೆ(ಏ.8 ರಂದು) ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂದು ವರದಿ ತಿಳಿಸಿದ್ದು, ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ.

ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆ ಸುಮಾರು ಒಂದು ಗಂಟೆಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು ಎನ್ನಲಾಗಿದೆ. ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಎಂಬವರಿಗೆ ಸೇರಿದ ಕಾರು ಇದು ಎಂದು ಗುರುತಿಸಲಾಗಿದೆ, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ ಎಂದು ಶಂಕಿಸಲಾಗಿದೆ.

See also  ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಕಾರು-ಸ್ಕೂಟಿ ಅಪಘಾತ, ಸ್ಕೂಟಿ ಸವಾರನಿಗೆ ಗಾಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget