ಕ್ರೈಂಸುಳ್ಯ

ಜಾಲ್ಸೂರು: ರಸ್ತೆ ನಿಲ್ಲಿಸಿದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಜಖಂಗೊಂಡ ದ್ವಿಚಕ್ರ ವಾಹನ

266

ನ್ಯೂಸ್‌ ನಾಟೌಟ್‌: ಜಾಲ್ಸೂರಿನಲ್ಲಿ ಇಂದು ಬೆಳಗ್ಗೆ ರಸ್ತೆ ಬದಿ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಘಟನೆ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಜಖಂಗೊಂಡಿದೆ. ದ್ವಿಚಕ್ರ ವಾಹನ ಯಶ್ವಿತ್ ಕಾಳಂಮನೆ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಅವರು ತಮ್ಮ‌ ಮನೆಯ ಎದುರಿನ ರಸ್ತೆ ಬದಿಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದ್ದರು. ಈ ಸಂದರ್ಭ ಮುರೂರು‌ ಕಡೆಯಿಂದ ವೇಗವಾಗಿ ಬಂದ ಕಾರು ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ

ಬಳಿಕ ಕಾರು ಚಾಲಕ ಕಿಶೋರ್ ಕಾರಿನಿಂದ ಇಳಿದು ಸ್ಥಳೀಯರಲ್ಲಿ ವಾಗ್ವಾದ ನಡೆಸಿದ್ದಾನೆ ಎನ್ನಲಾಗಿದೆ. ಅಲ್ಲದೇ ರಸ್ತೆಯ ಬದಿಯ ಮನೆಯೊಂದಕ್ಕೆ ನುಗ್ಗಿ ಮಗುವಿಗೆ ಥಳಿಸಿದ್ದಾನೆ ಎನ್ನಲಾಗಿದೆ. ಈ ಸಂದರ್ಭ ಮಗು ಬೊಬ್ಬೆ ಇಟ್ಟಾಗ ಮನೆಯವರು, ಸ್ಥಳೀಯರು ಸೇರಿ ಕಾರು ಚಾಲಕನನ್ನು ಹಿಡಿದು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ ಎಂದು ತಿಳಿದು ಬಂದಿದೆ.

See also  ಸುಳ್ಯದಲ್ಲಿ ನಡೆಯಲಿರುವ 'ಗಾಂಧಿಸ್ಮೃತಿ ಕಾರ್ಯಕ್ರಮ' ದ ಆಮಂತ್ರಣ ಪತ್ರಿಕೆ ರಿಲೀಸ್, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೆಂದ್ರ ಹೆಗ್ಗಡೆಯವರಿಂದ ಬಿಡುಗಡೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget