ಕೊಡಗು

ಬಸ್‌-ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ನ್ಯೂಸ್ ನಾಟೌಟ್: ಮಡಿಕೇರಿ ತಾಲೂಕಿನ ದೇವರಕೊಲ್ಲಿ ಎಂಬಲ್ಲಿ ಭಾನುವಾರ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದಲ್ಲಿ ಕಾರು ಚಾಲಕ ಸಹಿತ ಇಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್‌ ಮಂಗಳೂರು ಕಡೆಯಿಂದ ಮಡಿಕೇರಿ, ಮೈಸೂರು ಮಾರ್ಗವಾಗಿ ಬೆಂಗಳೂರು ಕಡೆಗೆ ಸಾಗುತ್ತಿತ್ತು. ಕೇರಳ ರಿಜಿಸ್ಟ್ರೇಶನ್ ಹೊಂದಿದ ಕಾರ್ ಮಡಿಕೇರಿಯಿಂದ ಸಂಪಾಜೆ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ನಿಯಂತ್ರಣ ತಪ್ಪಿ ಬಸ್ ಗೆ ಗುದ್ದಿದೆ ಎನ್ನಲಾಗಿದೆ. ಸದ್ಯ ಮಡಿಕೇರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮಡಿಕೇರಿ:ಕರಿಕೆ ಸರಕಾರಿ ಪ್ರೌಢಶಾಲೆ ಶಿಕ್ಷಕರನ್ನು ನೇಮಿಸುವಲ್ಲಿ ನಿರ್ಲಕ್ಷ್ಯ,ತಕ್ಷಣವೇ ನೇಮಿಸಿ ಸರ್, ವಿದ್ಯಾರ್ಥಿಗಳಿಂದ ಶಾಸಕ ಎ.ಎಸ್. ಪೊನ್ನಣ್ಣ‌ರಿಗೆ ಬಹಿರಂಗ ಪತ್ರ..!ಮುಗ್ಧ ಮಕ್ಕಳು ಬರೆದ ಪತ್ರದಲ್ಲಿ ಏನಿದೆ ಓದಿ..

ಸುಳ್ಯ:ಕೊರಗಜ್ಜ ದೈವಸ್ಥಾನದ ಕಾಲಾವಧಿ ನೇಮೋತ್ಸವ,ಆಮಂತ್ರಣ ಪತ್ರಿಕೆ ಬಿಡುಗಡೆ

ಮಡಿಕೇರಿ : ಕಾಫಿ ತೋಟಕ್ಕೆಂದು ತೆರಳಿದ್ದ ವ್ಯಕ್ತಿಗೆ ಕಾಡಾನೆ ದಾಳಿ, ಕಾಫಿ ಬೆಳೆಗಾರ ಗಂಭೀರ-ಚಿಕಿತ್ಸೆ