ಕ್ರೈಂ

ಸಾಲೂರು ಅರಣ್ಯದಲ್ಲಿ ಸುಟ್ಟ ಕಾರು ಮತ್ತು ಮೃತದೇಹ ಪತ್ತೆ

ಶಿವಮೊಗ್ಗ: ಇಲ್ಲಿನ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಣ್ಯದಲ್ಲಿ ಸುಟ್ಟ ಕಾರು ಮತ್ತು ಮೃತದೇಹ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆ ಕಾರು ಸುಟ್ಟು ಹೋಗಿರುವ ಶಂಕೆ ಇದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ.

ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಮಿಟ್ಲುಗೋಡು ಎಂಬ ಹಳ್ಳಿಯ ಸನಿಹದ ದಟ್ಟ ಅರಣ್ಯ ಪ್ರದೇಶದಲ್ಲಿ ಕಾರು ಸುಟ್ಟು ಕರಕಲಾಗಿ ಪತ್ತೆಯಾಗಿದೆ. ಕಾರಿನೊಳಗೆ ಮೃತದೇಹ ಸಹ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಮಾರುತಿ ಕಂಪನಿಯ ಶಿಫ್ಟ್‌ ಕಾರಿನ ನಂಬರ್ ಪ್ಲೇಟ್ ಸಹ ಸುಟ್ಟು ಹೋಗಿದ್ದು, ಗುರುತು ಪತ್ತೆ ಸದ್ಯಕ್ಕೆ ಸಾಧ್ಯವಾಗಿಲ್ಲ.

Related posts

ಆ ಒಬ್ಬನ ತಪ್ಪಿನಿಂದ ಆದ ರೈಲು ಅಪಘಾತದಿಂದ 290 ಜನ ಬಲಿ, ಅಪಘಾತಕ್ಕೆ ಕಾರಣವಾಯಿತು ಆತನ ನಿರ್ಲಕ್ಷ್ಯ

ರಾತ್ರೋರಾತ್ರಿ ಕಾರಿನಲ್ಲಿ ಬಂದು ನಾಯಿಗಳಿಗೆ ಗುಂಡಿಕ್ಕಿದ್ದೇಕೆ ಆತ..? 20ಕ್ಕೂ ಹೆಚ್ಚು ಬೀದಿ ನಾಯಿಗಳ ದುರಂತ ಅಂತ್ಯ!

ಮಂಗಳೂರು: ಜಲೀಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್