ಕ್ರೈಂದೇಶ-ವಿದೇಶವೈರಲ್ ನ್ಯೂಸ್

ದಕ್ಷಿಣ ಕನ್ನಡ: ಕಾರು ಢಿಕ್ಕಿಯಾಗಿ ಧರೆಗುರುಳಿದ ವಿದ್ಯುತ್ ಕಂಬ..! ಸ್ಥಳೀಯರಿಗೆ ವಿದ್ಯುತ್ ಪೂರೈಕೆ ಸ್ಥಗಿತ

ನ್ಯೂಸ್ ನಾಟೌಟ್: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಎಂಬಲ್ಲಿ ಎ.5 ರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ.

ಕಾರು ರಸ್ತೆಯ ಬದಿಯ ಕಬ್ಬಿಣದ ತಡೆಬೇಲಿಯನ್ನು ಭೇದಿಸಿ ನುಗ್ಗಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದುಬಿದ್ದಿದೆ. ಕಾರು ಭಾಗಶಃ ಜಖಂಗೊಂಡಿದೆ. ಕಾರಿನಲ್ಲಿದ್ದವರು ಕೇರಳ ಮೂಲದವರೆನ್ನಲಾಗಿದ್ದು, ಗಾಯಗೊಂಡಿರುವ ಸ್ಥಳೀಯರು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ವಿದ್ಯುತ್ ಕಂಬ ತುಂಡಾಗಿರುವುದರಿಂದ ಸ್ಥಳೀಯವಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ವಿದ್ಯುತ್ ಕಂಬ ಬದಲಾವಣೆ ಕಾರ್ಯ ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ.

Related posts

ಬಲತ್ಕಾರ ಸಂತ್ರಸ್ತೆಯ ಚಿಕಿತ್ಸೆ, ಶಿಕ್ಷಣ, ಮದುವೆಯ ಜವಾಬ್ದಾರಿ ಹೊತ್ತ ಈ ಪೊಲೀಸ್ ಅಧಿಕಾರಿ ಯಾರು? 15 ವರ್ಷದ ಬಾಲಕಿಯ ಸ್ಥಿತಿ ಕಂಡು ಮರುಗಿದ ತನಿಖಾಧಿಕಾರಿ..!

ಗುಜರಾತ್ : ಪ್ರಶ್ನೆ ಪತ್ರಿಕೆ ಸೋರಿಕೆ, ಪಂಚಾಯತ್ ಸೇವಾ ಆಯ್ಕೆ ಮಂಡಳಿಯ ಗುಮಾಸ್ತ ನೇಮಕಾತಿ ಪರೀಕ್ಷೆ ರದ್ದು

ಚೈತ್ರಾ ಕುಂದಾಪುರ ಮೇಲೆ ಮತ್ತೊಂದು ಎಫ್‌ಐಆರ್‌! ಉಡುಪಿಯಲ್ಲಿ ಮತ್ತೊಂದು ವಂಚನೆ ಪ್ರಕರಣ ಬಯಲು..! ಏನಿದು ಹೊಸಾ ಕೇಸ್?