ನ್ಯೂಸ್ ನಾಟೌಟ್ : ಸುಳ್ಯದ ಸೋಣಂಗೇರಿ ಜಂಕ್ಷನ್ ನಲ್ಲಿ ಬುಧವಾರ ಸಂಜೆ(ಜ.10)ರಂದು ಅಪಘಾತ ಸಂಭವಿಸಿದೆ.
ಸುಳ್ಯದಿಂದ ಪಂಜ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮತ್ತು ಎಲಿಮಲೆಯಿಂದ ಸುಳ್ಯಕಡೆಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರು ನಡುವೆ ಸೋಣಂಗೇರಿ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದ್ದು, ಅಪಘಾತದ ರಭಸಕ್ಕೆ ಎರಡು ಕಾರುಗಳೂ ಜಖಂಗೊಂಡಿದೆ.
ಶಿಫ್ಟ್ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಪ್ರಕರಣ ರಾಜಿ ಸಂಧಾನದ ಮೂಲಕ ಬಗೆಹರಿಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.