ನ್ಯೂಸ್ ನಾಟೌಟ್ : ಕಾರು ಚಾಲಕನೋರ್ವ ಮೂರು ನಾಯಿಮರಿಗಳನ್ನು ಕಾರಿನ ರೂಫ್ ಮೇಲೆ ಕೂರಿಸಿ ಹೋಗುತ್ತಿದ್ದ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ವಿಡಿಯೋ ವೈರಲ್ ಆಗುತ್ತಲೇ ಕಾರು ಚಾಲಕನಿಗೆ ಬೆಂಗಳೂರು ಪೊಲೀಸರು ತಕ್ಕಶಾಸ್ತಿ ಮಾಡಿದ್ದಾರೆ.
ಯಾವುದೇ ಸುರಕ್ಷತಾ ಕ್ರಮವಿಲ್ಲದೇ ನಾಯಿಗಳನ್ನು ಕಾರಿನ ಟಾಪ್ ಮೇಲೆ ಕೂರಿಸಿ ಕಾರಿನೊಳಗೆ ಜೋರಾಗಿ ಮ್ಯೂಸಿಕ್ ಹಾಕಿಕೊಂಡು ಚಾಲಕ ಕಾರು ಚಲಾಯಿಸಿದ್ದಾನೆ. ಇದನ್ನು ಪ್ರಶ್ನಿಸಿದವರನ್ನೇ ಬಾಯಿಗೆ ಬಂದಂತೆ ನಿಂದಿಸಿದ್ದಾನೆ. ಮೂರು ನಾಯಿಗಳನ್ನು ಕೂರಿಸಿಕೊಂಡು ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿದ್ದನ್ನು ಕೇಳಲು ಹೋದವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಈ ವಿಷಯ ಬಾಣಸವಾಡಿ ಪೊಲೀಸರ ಗಮನಕ್ಕೆ ಬಂದಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಹಿರಿಯ ಅಧಿಕಾರಿಗಳ ಸೂಚನೆಯಂತೆ 36 ವರ್ಷದ ಆರೋಪಿ ಹರೀಶ್ ನನ್ನು ಬಂಧಿಸಿದ್ದಾರೆ. ಆರೋಪಿ ಹರೀಶ್ ವಿರುದ್ಧ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Click