ಪುತ್ತೂರು

ಪುತ್ತೂರು: ನೇರಳಕಟ್ಟೆಯಲ್ಲಿ ಕಾರು ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಂಭೀರ ಗಾಯ

ನ್ಯೂಸ್‌ ನಾಟೌಟ್‌ : ಮಾಣಿ-ಮೈಸೂರು ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಮಂಗಳವಾರ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಯಾಣಿಕರು ಮುಂಬೈ ಮೂಲದವರಾಗಿದ್ದು, ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಪುತ್ತೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಸಂಚಾರ ಪೊಲೀಸರು ಕಾರನ್ನು ಹೊರತೆಗೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಅಂಗಡಿಗೆ ಕೆಲಸಕ್ಕೆ ಬಂದ ಹುಡುಗಿಯನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿ ಲೈಂಗಿಕ ಕಿರುಕುಳ, ಉಜಿರೆಯ ಉದ್ಯಮಿಗೆ ಜಾಮೀನು

ಆಟೋ ರಿಕ್ಷಾ ಚಾಲಕನಿಂದ ಮಹಿಳೆಯ ಅತ್ಯಾಚಾರಕ್ಕೆ ಯತ್ನ

ಪುತ್ತೂರಿನಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಹಾಲು ಪ್ಯಾಕಿಂಗ್ ಘಟಕ ನಿರ್ಮಾಣ