Latestಕ್ರೈಂರಾಜಕೀಯರಾಜ್ಯ

ರೇಪ್ ಕೇಸ್ ಹಾಕಿಸಿದ್ದು ಡಿಕೆಶಿ ಎಂದ ಮುನಿರತ್ನ..! ನನ್ನ ಮೇಲೆ ಹನಿಟ್ರ್ಯಾಪ್‌ ಯತ್ನ ಆಗಿದೆ ಎಂದು ಸದನದಲ್ಲೇ ಹೇಳಿದ ಮತ್ತೊಬ್ಬ ಸಚಿವ..!

865

ನ್ಯೂಸ್ ನಾಟೌಟ್: ಸಿಬಿಐ ತನಿಖೆ ಮಾಡಿಸಿ ನನ್ನ ಮೇಲೆ ರೇಪ್ ಕೇಸ್ ಹಾಕಿಸಿದ್ದು ಡಿಕೆ ಶಿವಕುಮಾರ್ ಎಂದು ಶಾಸಕ ಮುನಿರತ್ನ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಮುನಿರತ್ನ, ಪೊಲೀಸ್ ಕಮೀಷನರ್‌ ಗೆ ಹೇಳಿ ಡಿಸಿಎಂ ಡಿ.ಕೆ.ಶಿವಕುಮಾರ್ ನನ್ನ ಮೇಲೆ ರೇಪ್ ಕೇಸ್ ಹಾಕಿಸಿದ್ದರು. ಅಟ್ರಾಸಿಟಿ ಕೇಸಲ್ಲಿ ಕೋರ್ಟ್‌ಗೆ ಹೋಗಿದ್ದಾಗ ರಾಜೀನಾಮೆ ಕೊಟ್ಟರೆ ರೇಪ್ ಕೇಸ್ ಹಾಕಲ್ಲ ಎಂದು ಡಿವೈಎಸ್‌ಪಿ ಧರ್ಮೇಂದ್ರ ನೇರವಾಗಿ ಈ ಮಾತನ್ನು ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಸೇರಿ ನನ್ನ ಮೇಲೆ ಸಿಬಿಐ ತನಿಖೆ ಮಾಡಿಸಿ ರೇಪ್ ಕೇಸ್ ಹಾಕಿಸಿದ್ದರು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ರಾಜ್ಯದ 48 ರಾಜಕೀಯ ಮುಖಂಡರ ಸಿ.ಡಿ, ಪೆನ್‌ಡ್ರೈವ್‌ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್‌ (Honeytrap) ಯತ್ನ ನಡೆದಿದೆ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಮಾಹಿತಿ ನೀಡಿದರು.

ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ರಾಜಣ್ಣ, ಇದರ ಬಗ್ಗೆ ದೂರು ಕೊಡುತ್ತೇನೆ. ಗೃಹ ಸಚಿವರು ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು. ಬಜೆಟ್ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈ ವಿಚಾರ ಪ್ರಸ್ತಾಪ ಮಾಡಿದ ಯತ್ನಾಳ್, ರಾಜ್ಯದಲ್ಲಿ ಸಹಕಾರಿ ಸಚಿವರ ಮೇಲೆ ಹನಿಟ್ರ್ಯಾಪ್ ಮಾಡುವ ಪ್ರಯತ್ನ ಮಾಡಲಾಗಿದೆ. ಇದೊಂದು ಕೆಟ್ಟ ಸಂಸ್ಕೃತಿ. ಜನ ಪ್ರತಿನಿಧಿಗಳನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದರು.

ಇದನ್ನೂ ಓದಿ: ಕರ್ನಾಟಕ ಬಂದ್ ಇದ್ದರೂ ಸಿನಿಮಾ ಚಿತ್ರೀಕರಣ ನಿಲ್ಲಿಸಲ್ಲ ಎಂದ ವಾಣಿಜ್ಯ ಮಂಡಳಿ..! ಸಿನಿಮಾ ಪ್ರದರ್ಶನಗಳು ಕೂಡ ಎಂದಿನಂತೆ..!

See also  ಕೆಟ್ಟು ನಿಂತಿದ್ದ ವಾಹನದಡಿ ಸಿಲುಕಿದ್ದೇಗೆ ಆ ಮೂವರು..? ಸ್ಥಳದಲ್ಲೆ ಪ್ರಾಣ ಬಿಟ್ಟದ್ದೇಗೆ ಕಾರ್ಮಿಕರು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget