ಕ್ರೈಂವೈರಲ್ ನ್ಯೂಸ್

ಗುಂಡು ತಗುಲಿದ್ದ ರೌಡಿಶೀಟರ್ ಆಸ್ಪತ್ರೆಯಿಂದ ಎಸ್ಕೇಪ್..! ಸುಳಿವು ಸಿಕ್ಕವರು ಈ ನಂಬರ್ ಗೆ ಕಾಲ್ ಮಾಡಿ, ಇಲ್ಲಿದೆ ಸಂಪೂರ್ಣ ಮಾಹಿತಿ

251

ನ್ಯೂಸ್ ನಾಟೌಟ್‌: ಕೊಲೆಯತ್ನ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಆರೋಪಿಯಾಗಿ, ತಲೆ ಮರೆಸಿಕೊಂಡಿದ್ದ ರೌಡಿಶೀಟರ್ ಓರ್ವ ಇತ್ತೀಚೆಗೆ ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಶುಕ್ರವಾರ(ಜ.12) ಮುಂಜಾನೆ ನಗರದಲ್ಲಿ ವರದಿಯಾಗಿದೆ.

ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿಯ ಮಾಗಲು ಗ್ರಾಮದ ನಿವಾಸಿ ಪೂರ್ಣೇಶ್ ಪೊಲೀಸರ ಕಣ್ತಪ್ಪಿಸಿ ಆಸ್ಪತ್ರೆಯಿಂದ ಪರಾರಿಯಾಗಿರುವ ರೌಡಿಶೀಟರ್ ಆಗಿದ್ದು, ಗುಂಟೇಟಿನಿಂದ ಗಾಯಗೊಂಡಿದ್ದ ಆರೋಪಿಗೆ ಚಿಕಿತ್ಸೆ ಕೊಡಿಸಲು ಪೊಲೀಸರು ಆರೋಪಿಯನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದೊಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಪೂರ್ಣೇಶ್ ಇತ್ತೀಚೆಗೆ ಕೊಂಚ ಚೇತರಿಸಿಕೊಂಡಿದ್ದ. ಶುಕ್ರವಾರ ಮುಂಜಾನೆ ಪೊಲೀಸರ ಭದ್ರತೆಯಲ್ಲೇ ಆಸ್ಪತ್ರೆಯಲ್ಲಿದ್ದ ಪೂರ್ಣೇಶ್ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾನೆಂದು ತಿಳಿದು ಬಂದಿದೆ.

ಪೂಣೇಶ್ ವಿರುದ್ಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 3 ಕೊಲೆ ಯತ್ನ ಪ್ರಕರಣ, ಪೊಲೀಸರ ಮೇಲೆ ಹಲ್ಲೆ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು, ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ರೌಡಿಶೀಟರ್ ಪ್ರಕರಣ ದಾಖಲಿಸಲಾಗಿದೆ.

ಈತನ ಸುಳಿವು ಪತ್ತೆಯಾದಲ್ಲಿ 9480805100, 8277991000, 08266: 250666 ಸಂಖ್ಯೆಗೆ ಮಾಹಿತಿ ನೀಡಬೇಕೆಂದು ಪೊಲೀಸ್ ಇಲಾಖೆಯ ಪ್ರಕಟನೆ ತಿಳಿಸಿದೆ.

ಕಳೆದ ಕೆಲ ವರ್ಷಗಳ ಹಿಂದೆ ಕೊಲೆ ಯತ್ನ ನಡೆಸಿದ ಪ್ರಕರಣ ದಾಖಲಾದ ಬಳಿಕ ನಾಪತ್ತೆಯಾಗಿದ್ದ ಆರೋಪಿ ಪೂಣೇಶ್ ತನ್ನ ಮನೆ ಸಮೀಪದ ಕಾಡನ್ನೇ ಅಡಗುದಾಣ ಮಾಡಿಕೊಂಡು ಯಾರ ಕಣ್ಣಿಗೂ ಬೀಳದಂತೆ ತಲೆ ಮರೆಸಿಕೊಂಡಿದ್ದ. ಕಾಡಿನಲ್ಲಿ ರಾತ್ರಿ ವೇಳೆ ಮರದ ಕೊಂಬೆಗಳ ಮೇಲೆ ಮಲಗುತ್ತಿದ್ದ. ಆಗಾಗ್ಗೆ ತನ್ನ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದ್ದು, ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರೂ ಅನೇಕ ವರ್ಷಗಳಿಂದ ಪೊಲೀಸರ ಕಣ್ಣಿಗೆ ಬೀಳದೇ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ.

https://newsnotout.com/2024/01/kannada-news-special-invitation-of-ayodya/
See also  ನಾನು ಅಲ್ಲು ಅರ್ಜುನ್‌ ನ ಅಪ್ಪಟ ಅಭಿಮಾನಿ ಎಂದ ಅಮಿತಾಬ್‌ ಬಚ್ಚನ್‌, ಅಲ್ಲು ಅರ್ಜುನ್‌ ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡ ಬಾಲಿವುಡ್ ನಟ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget