ಕ್ರೀಡೆ/ಸಿನಿಮಾ

ಕ್ರೀಡಾಪಟುಗಳ ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ

285
Spread the love

ಮಡಿಕೇರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2020 ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ. ಕರ್ನಾಟಕವನ್ನು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಅಧಿಕೃತವಾಗಿ ಪ್ರತಿನಿಧಿಸಿ ಪದಕ ಪಡೆದ ಅರ್ಹ ಕ್ರೀಡಾಪಟುಗಳು ಹಾಗೂ ಭಾರತವನ್ನು ಪ್ರತಿನಿಧಿಸಿ ಅಂತಾರಾಪ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಆಗಸ್ಟ್ 25 ರೊಳಗೆ ಪ್ರಸ್ತಾವನೆಯನ್ನು ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ: 08272-228985 ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

See also  ಮಹಿಳೆಗೆ ನಾಯಿ ಕಚ್ಚಿದಾಗ ಸಿಸಿಟಿವಿ ವರ್ಕ್‌ ಆಗ್ತಿರಲಿಲ್ಲ ಎಂದದ್ದೇಕೆ? ಪೊಲೀಸರ ಮುಂದೆ ನಟ ದರ್ಶನ್ ಕೊಟ್ಟ ಹೇಳಿಕೆಯೇನು?
  Ad Widget   Ad Widget   Ad Widget