ಕ್ರೈಂಬೆಂಗಳೂರು

ಸಿಸಿಬಿಗೆ ವರ್ಗಾವಣೆಯಾಗಿದ್ದ ಪೊಲೀಸ್‌ ಅಧಿಕಾರಿ ಆತ್ಮಹತ್ಯೆ..! ದಕ್ಷ ಅಧಿಕಾರಿಗಳಿಗೆ ಹೆಚ್ಚುತ್ತಿದೆಯೇ ಮಾನಸಿಕ ಕಿರುಕುಳ..?

234

ನ್ಯೂಸ್ ನಾಟೌಟ್: ಯಾದಗಿರಿಯಲ್ಲಿ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ರಾಜ್ಯ ಸರ್ಕಾರಕ್ಕೆ ಮುಜುಗರ ಸೃಷ್ಟಿಸುವ ಬೆನ್ನಲ್ಲೇ ಇನ್ನೊಬ್ಬ ಎಸ್‌ಐ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದೆ.

ಮೃತ ಪೊಲೀಸ್‌ ಅಧಿಕಾರಿಯನ್ನು ತಿಮ್ಮೇಗೌಡ ಎಂದು ಗುರುತಿಸಲಾಗಿದೆ. ಬೆಂಗಳೂರು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಬಿಡದಿಯ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ಎರಡು ತಿಂಗಳ ಹಿಂದೆ ಸಿಸಿಬಿಗೆ (CCB) ವರ್ಗಾವಣೆಯಾಗಿತ್ತು.

ಈ ಹಿಂದೆ ಕುಂಬಳಗೋಡಿನ ಇನ್‌ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಎರಡು ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ಇದೀಗ ತಮ್ಮ ತೋಟದ ಜಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ. 1998ರ ರೂರಲ್ ಬ್ಯಾಚ್ ಇನ್ಸ್‌ಪೆಕ್ಟರ್ ತಿಮ್ಮೇಗೌಡ, ಚನ್ನಪಟ್ಟಣದ ಹಳ್ಳಿಯೊಂದರ ನಿವಾಸಿ. ಗ್ರಾಮೀಣ ಕೃಪಾಂಕದಲ್ಲಿ ಆಯ್ಕೆಯಾಗಿದ್ದ ತಿಮ್ಮೇಗೌಡ ವಿಧಾನಸಭೆ ಚುನಾವಣೆ ವೇಳೆಗೆ ಬಿಡದಿಯಿಂದ ಅತ್ತಿಬೆಲೆಗೆ ವರ್ಗಾವಣೆಯಾಗಿದ್ದರು. 2023ರ ಸೆಪ್ಟೆಂಬರ್‌ನಲ್ಲಿ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ನಡೆದ ಬಳಿಕ ಆ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದರು. ನಂತರ ಕುಂಬಳಗೋಡು ಠಾಣೆಗೆ ವರ್ಗಾವಣೆಯಾಗಿದ್ದು, ಇತ್ತೀಚೆಗೆ ಸಿಸಿಬಿಗೆ ವರ್ಗಾವಣೆಯಾಗಿತ್ತು.

See also  ಅಂಪೈರ್ ತೀರ್ಪಿನಿಂದ ಫುಟ್‌ ಬಾಲ್ ಮೈದಾನದಲ್ಲೇ ಹೊಡೆದಾಟ..! 100 ಮಂದಿ ಸಾವು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget