ನ್ಯೂಸ್ ನಾಟೌಟ್: ಬಿಡದಿಯಲ್ಲಿ ಅಪ್ರಾಪ್ತ ಬಾಲಕಿ ಹತ್ಯೆ ಕೇಸ್ ಗೆ ಟ್ವಿಸ್ಟ್ ಸಿಕ್ಕಿದೆ, ರೈಲು ಡಿಕ್ಕಿ ಹೊಡೆದು ಬಾಲಕಿ ಮೃತಪಟ್ಟಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಂಗಳೂರಿನ ರಾಮನಗರದ ಬಿಡದಿಯ ಹೋಬಳಿಯ ಭದ್ರಾಪುರಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಖುಷಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ಪೊಲೀಸರು ಬಾಲಕಿಯ 32 ಬಗೆಯ ಸ್ಯಾಂಪಲ್ಸ್ ಗಳನ್ನು ಎಫ್ ಎಸ್ ಎಲ್ ಗೆ ಕಳುಹಿಸಿದ್ದರು. ಬಳಿಕ ಎಫ್ ಎಸ್ ಎಲ್ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂಬುದು ದೃಢವಾಗಿತ್ತು.
ಇದೀಗ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿ ಪೊಲೀಸರ ಕೈ ಸೇರಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಹೆಡ್ ಇಂಜುರಿಯಿಂದ ಬಾಲಕಿ ಸಾವನ್ನಪ್ಪಿರುವುದು ದೃಢವಾಗಿದೆ. ರೈಲು ಡಿಕ್ಕಿಯಾದ ಪರಿಣಾಮ ಬಾಲಕಿ ತಲೆಗೆ ತೀವ್ರ ಪೆಟ್ಟು ಬಿದ್ದು ಮೃತಪಟ್ಟಿದ್ದಾಳೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಅಲ್ಲದೇ ರೈಲು ಡಿಕ್ಕಿಯಾಗಿರುವ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ತನಿಖೆಯ ವೇಳೆ ಬಯಲಾಗಿದೆ.