ಕರಾವಳಿದೇಶ-ವಿದೇಶಬೆಂಗಳೂರುರಾಜ್ಯವಿಡಿಯೋವೈರಲ್ ನ್ಯೂಸ್

ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಎರಗಿದ ಕಾಮುಕ..! ಇಲ್ಲಿದೆ ಸಿಸಿಟಿವಿ ದೃಶ್ಯ..!

219

ನ್ಯೂಸ್‌ ನಾಟೌಟ್‌: ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಮಹಿಳೆಯನ್ನು ವ್ಯಕ್ತಿಯೋರ್ವ ಬಲವಂತವಾಗಿ ತಬ್ಬಿ ಮುತ್ತಿಟ್ಟು, ಅಶ್ಲೀಲವಾಗಿ ವರ್ತಿಸಿ ಮಹಿಳೆ ಕಿರುಚಿಕೊಂಡ ಬಳಿಕ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಚಿನ್ನದ ಸರ, ಮೊಬೈಲ್, ಪರ್ಸ್ ಕಳ್ಳತನದಂತಹ ಪ್ರಕರಣಗಳು ನಿತ್ಯ ವರದಿಯಾಗುತ್ತಿವೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಬೆಂಗಳೂರಿನಲ್ಲಿ ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಆ.2ರಂದು ನಡೆದಿದ್ದು ತಡವಾಗಿ ಬಹಿರಂಗವಾಗಿದೆ.

ಬೆಂಗಳೂರಿನ ಕೋಣನಕುಂಟೆಯ ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಆಕೆ ಬಳಿ ಬಂದು ಆಕೆಯನ್ನು ತಬ್ಬಿಕೊಂಡು ಬಲವಂತವಾಗಿ ಮುತ್ತಿಟ್ಟಿದ್ದಾನೆ.
ಈ ವೇಳೆ ಮಹಿಳೆ ಆತನಿಂದ ತಪ್ಪಿಸಿಕೊಂಡು ಮುಂದೆ ಹೋಗಿದ್ದು, ಮತ್ತೆ ಆಕೆಯನ್ನು ಹಿಂಬಾಲಿಸಿದ ಆತ ಮತ್ತೆ ಆಕೆಯನ್ನು ತಬ್ಬಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಕೂಡಲೇ ಆತ ಆಕೆಯನ್ನು ಬಿಟ್ಟು ಓಡಿ ಹೋಗಿದ್ದಾನೆ. ಘಟನೆ ಮನೆಯೊಂದಕ್ಕೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು. ಇದೇ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

Click

https://newsnotout.com/2024/08/kodagu-family-are-re-located-kannada-news-landslide-fear/
https://newsnotout.com/2024/08/airplane-kannada-news-viral-issue-emergency-landing/

https://newsnotout.com/2024/08/wayanad-kannada-news-first-person-who-called-emergency-call-about-incident/ https://newsnotout.com/2024/08/pilgrims-kannada-news-current-shock-kannada-news-police-investigation/             

See also  ಕಾಶ್ಮೀರದಲ್ಲಿಉಗ್ರರ ದಾಳಿ: ಹೆಲ್ಪ್‌ ಲೈನ್ ಸಂಖ್ಯೆಗಳನ್ನು ಬಿಡುಗಡೆ ಮಾಡಿದ ಸರ್ಕಾರ, ಕನ್ನಡಿಗರ ನೆರವಿಗೆ ತೆರಳಿದ ಸಚಿವ ಸಂತೋಷ್‌ ಲಾಡ್
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget