Latestದೇಶ-ವಿದೇಶರಾಜಕೀಯ

ಮುಂಬರುವ ಜನಗಣತಿಯಲ್ಲಿ ಜಾತಿಗಣತಿ ಸೇರಿಸಲು ಕೇಂದ್ರ ಸರ್ಕಾರ ನಿರ್ಧಾರ..! ಕೇಂದ್ರ ರೈಲ್ವೇ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ ಮಾಹಿತಿ

591

ನ್ಯೂಸ್ ನಾಟೌಟ್: ಜನಗಣತಿಯ ಜೊತೆ ಜಾತಿ ಗಣತಿ ನಡೆಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.
ಬಿಜೆಪಿ ಜಾತಿಗಣತಿಯನ್ನು ವಿರೋಧಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪದ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶಾದ್ಯಂತ ಜಾತಿ ಗಣತಿ ನಡೆಸುವುದಾಗಿ ಹೇಳಿದೆ.

2021ರಲ್ಲಿ ಜನಗಣತಿ ನಡೆಯಬೇಕಿತ್ತು. ಆದರೆ ಕೋವಿಡ್‌ ಕಾರಣದಿಂದ ವಿಳಂಬವಾಗಿದ್ದು 2026 ರಲ್ಲಿ ನಡೆಯುವ ಸಾಧ್ಯತೆಯಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು(ಏ.30) ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೇ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದರು.

ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಬೇಕೆಂದು ಇಂದು ನಿರ್ಧರಿಸಿದೆ. ರಾಜಕೀಯ ಲಾಭಕ್ಕಾಗಿ ಜಾತಿ ಸಮೀಕ್ಷೆಗಳನ್ನು ವಿರೋಧ ಪಕ್ಷಗಳು ಬಳಸುತ್ತಿವೆ ಎಂದು ಆರೋಪಿಸಿದರು.

ಹಲವಾರು ರಾಜ್ಯಗಳಲ್ಲಿ ರಾಜ್ಯ ಸರ್ಕಾರಗಳಿಂದ ನಡೆಸಲಾದ ಜಾತಿ ಜನಗಣತಿ ಕಾರ್ಯವು ಅವೈಜ್ಞಾನಿಕವಾಗಿದೆ ಎಂದು ವೈಷ್ಣವ್ ದೂರಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಪಹಲ್ಗಾಮ್, ಕಾಶ್ಮೀರ ಕುರಿತ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದ‌ ಅಶ್ವಿನಿ‌ ವೈಷ್ಣವ್ ಕ್ಯಾಬಿನೆಟ್ ‌ಸಭೆಯ ಬಗ್ಗೆ ಮಾತ್ರ ಕೇಳಿ‌ ಎಂದು ಪತ್ರಕರ್ತರಿಗೆ ಹೇಳಿದ್ದಾರೆ.

MBBS ವಿದ್ಯಾರ್ಥಿಗಳಿಗೆ 80 ಕೋಟಿ ರೂ. ಸ್ಕಾಲರ್‌ ಶಿಪ್‌ ನೀಡದೆ ವಂಚನೆ..! ಮುಖಂಡನ ಮನೆ ಮೇಲೆ ಇಡಿ ದಾಳಿ..!

ಮಾಜಿ ಬಿಗ್ ​ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಜೈಲಿನಿಂದ ಬಿಡುಗಡೆ..! 93 ದಿನಗಳ ಬಳಿಕ ಜಾಮೀನು..!

See also  ಶಿರೂರು ಗುಡ್ಡ ಕುಸಿತದಿಂದ ಬದುಕುಳಿದ ವೃದ್ದ ಸಿಡಿಲು ಬಡಿದು ಸಾವು!ಏನಿದು ಘಟನೆ?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget