ನ್ಯೂಸ್ ನಾಟೌಟ್: ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರಿಗೆ ಕೇಂದ್ರ ಸರ್ಕಾರ ಇಂದಿನಿಂದ ಅನ್ವಯವಾಗುವಂತೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ.
ಕೇಂದ್ರ ಸರ್ಕಾರವು ದ್ರೌಪದಿ ಮುರ್ಮುಗೆ ಕೇಂದ್ರ ಮೀಸಲು ಪೊಲೀಸ್ ಪಡೆಗಳಿಂದ (ಸಿಆರ್ ಪಿಎಫ್) ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ. ಇಂದಿನಿಂದಲೇ ಇದು ಜಾರಿಗೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರ. ಜಾರ್ಖಂಡ್ ನ ರಾಜ್ಯಪಾಲರಾಗಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯನ್ನಾಗಿ ಬಿಜೆಪಿ ಮಂಗಳವಾರ ಘೋಷಿಸಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿತ್ತು. ಇದಕ್ಕೂ ಮುನ್ನ, ಪ್ರತಿಪಕ್ಷಗಳು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಿದ್ದವು.